HomeIndiaBREAKING: ಟ್ರಕ್ ಗೆ ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ ಐವರು ಸಾವು

BREAKING: ಟ್ರಕ್ ಗೆ ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ ಐವರು ಸಾವು

ಉತ್ತರ ಪ್ರದೇಶದ ಅಲಿಗಢದ ಯಮುನಾ ಎಕ್ಸ್‌ ಪ್ರೆಸ್‌ ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಖಾಸಗಿ ಬಸ್ ಟ್ರಕ್‌ ಗೆ ಡಿಕ್ಕಿ ಹೊಡೆದು ಯಮುನಾ ಎಕ್ಸ್‌ ಪ್ರೆಸ್‌ ವೇಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಐವರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 18 ಮಂದಿ ಗಾಯಗೊಂಡಿದ್ದಾರೆ. ಮಾಹಿತಿಯ ಪ್ರಕಾರ, ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯ ತಪ್ಪಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ದೆಹಲಿಯಿಂದ ಅಜಂಗಢಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಮುಂಜಾನೆ ಟ್ರಕ್‌ಗೆ ಡಿಕ್ಕಿ ಹೊಡೆದಿದೆ.

ಘಟನೆಯ ನಂತರ ಸ್ಥಳೀಯ ಅಧಿಕಾರಿಗಳು ಗಾಯಾಳುಗಳನ್ನು ವೈದ್ಯಕೀಯ ಚಿಕಿತ್ಸೆಗಾಗಿ ಜೇವರ್‌ನ ಕೈಲಾಶ್ ಆಸ್ಪತ್ರೆಗೆ ರವಾನಿಸಿದ್ದಾರೆ. ಪೊಲೀಸರು ಅಪಘಾತದ ಕಾರಣದ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular