ಲಕ್ನೋ: ಉತ್ತರ ಪ್ರದೇಶದ ಶಾಲೆಗಳಲ್ಲಿ ಇನ್ನು ಮುಂದೆ ಕನ್ನಡ ಸೇರಿದಂತೆ ಆರು ಭಾಷೆಗಳನ್ನು ಕಲಿಸಲು ಸರ್ಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಘೋಷಿಸಿದ್ದಾರೆ.
ವಿವಿಧ ರಾಜ್ಯಗಳ ನಡುವೆ ಸಾಮರಸ್ಯ ಬೆಳೆಸುವುದಕ್ಕಾಗಿ ಉತ್ತರ ಪ್ರದೇಶ ಸರ್ಕಾರ ವಿದ್ಯಾರ್ಥಿಗಳಿಗೆ ಕನ್ನಡ ಸೇರಿ ಆರು ಪ್ರಾದೇಶಿಕ ಭಾಷೆಗಳನ್ನು ಐಚ್ಚಿಕ ವಿಷಯವನ್ನಾಗಿ ಕಲಿಸಲು ಮುಂದಾಗಿದೆ ಎಂದು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರಿಂದ ಪ್ರೇರಿತವಾಗಿ ರಾಜ್ಯ ಸರ್ಕಾರವು ಕನ್ನಡ, ತಮಿಳು, ತೆಲುಗು, ಮಲಯಾಳಂ, ಬಂಗಾಳಿ, ಮರಾಠಿ ಭಾಷೆಯನ್ನು ವೃತ್ತಿಪರ ವಿಷಯಗಳಲ್ಲಿ ಸೇರ್ಪಡೆ ಮಾಡಲಿದೆ. ವಿದ್ಯಾರ್ಥಿಗಳು ಇಷ್ಟ ಬಂದ ಒಂದು ಭಾಷೆಯನ್ನು ಕಲಿಯಬಹುದಾಗಿದ್ದು, ಸರ್ಕಾರವೇ ವೆಚ್ಚ ಭರಿಸುತ್ತದೆ. ಇದು ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಸಾಮರ್ಥ್ಯ ಬಲಪಡಿಸುತ್ತದೆ ಎಂದು ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.
