HomeLatest Newsಉತ್ತರ ಪ್ರದೇಶ ಶಾಲೆಗಳಲ್ಲಿ ಇನ್ಮುಂದೆ ಕನ್ನಡ ಸೇರಿ 6 ಭಾಷೆಗಳ ಕಲಿಕೆ: ಸಿಎಂ ಯೋಗಿ ಆದಿತ್ಯನಾಥ್...

ಉತ್ತರ ಪ್ರದೇಶ ಶಾಲೆಗಳಲ್ಲಿ ಇನ್ಮುಂದೆ ಕನ್ನಡ ಸೇರಿ 6 ಭಾಷೆಗಳ ಕಲಿಕೆ: ಸಿಎಂ ಯೋಗಿ ಆದಿತ್ಯನಾಥ್ ಘೋಷಣೆ

ಲಕ್ನೋ: ಉತ್ತರ ಪ್ರದೇಶದ ಶಾಲೆಗಳಲ್ಲಿ ಇನ್ನು ಮುಂದೆ ಕನ್ನಡ ಸೇರಿದಂತೆ ಆರು ಭಾಷೆಗಳನ್ನು ಕಲಿಸಲು ಸರ್ಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಘೋಷಿಸಿದ್ದಾರೆ.

ವಿವಿಧ ರಾಜ್ಯಗಳ ನಡುವೆ ಸಾಮರಸ್ಯ ಬೆಳೆಸುವುದಕ್ಕಾಗಿ ಉತ್ತರ ಪ್ರದೇಶ ಸರ್ಕಾರ ವಿದ್ಯಾರ್ಥಿಗಳಿಗೆ ಕನ್ನಡ ಸೇರಿ ಆರು ಪ್ರಾದೇಶಿಕ ಭಾಷೆಗಳನ್ನು ಐಚ್ಚಿಕ ವಿಷಯವನ್ನಾಗಿ ಕಲಿಸಲು ಮುಂದಾಗಿದೆ ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರಿಂದ ಪ್ರೇರಿತವಾಗಿ ರಾಜ್ಯ ಸರ್ಕಾರವು ಕನ್ನಡ, ತಮಿಳು, ತೆಲುಗು, ಮಲಯಾಳಂ, ಬಂಗಾಳಿ, ಮರಾಠಿ ಭಾಷೆಯನ್ನು ವೃತ್ತಿಪರ ವಿಷಯಗಳಲ್ಲಿ ಸೇರ್ಪಡೆ ಮಾಡಲಿದೆ. ವಿದ್ಯಾರ್ಥಿಗಳು ಇಷ್ಟ ಬಂದ ಒಂದು ಭಾಷೆಯನ್ನು ಕಲಿಯಬಹುದಾಗಿದ್ದು, ಸರ್ಕಾರವೇ ವೆಚ್ಚ ಭರಿಸುತ್ತದೆ. ಇದು ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಸಾಮರ್ಥ್ಯ ಬಲಪಡಿಸುತ್ತದೆ ಎಂದು ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular