HomeIndiaವಿದ್ಯಾರ್ಥಿಯಿಂದಲೇ ಘೋರ ಕೃತ್ಯ: ಕ್ಲಾಸ್ ರೂಂನಲ್ಲಿ ಮೊಬೈಲ್ ವಶಕ್ಕೆ ಪಡೆದ ಶಿಕ್ಷಕನಿಗೆ ಚಾಕು ಇರಿತ

ವಿದ್ಯಾರ್ಥಿಯಿಂದಲೇ ಘೋರ ಕೃತ್ಯ: ಕ್ಲಾಸ್ ರೂಂನಲ್ಲಿ ಮೊಬೈಲ್ ವಶಕ್ಕೆ ಪಡೆದ ಶಿಕ್ಷಕನಿಗೆ ಚಾಕು ಇರಿತ

ಲಖನೌ: ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಮಿಹಿನ್‌ ಪುರವಾದಲ್ಲಿರುವ ನವಯುಗ್ ಇಂಟರ್ ಕಾಲೇಜಿನಲ್ಲಿ ಓದುತ್ತಿರುವ 11 ನೇ ತರಗತಿಯ ವಿದ್ಯಾರ್ಥಿ ಗುರುವಾರ ತರಗತಿಯಲ್ಲಿ ತನ್ನ ಮೊಬೈಲ್ ಫೋನ್ ಜಪ್ತಿ ಮಾಡಿದ್ದಕ್ಕಾಗಿ ತನ್ನ ಇಂಗ್ಲಿಷ್ ಶಿಕ್ಷಕರಿಗೆ ಚಾಕುವಿನಿಂದ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿಕ್ಷಕ ರಾಜೇಂದ್ರ ಪ್ರಸಾದ್‌ಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಸಹಾಯಕ ಪೊಲೀಸ್ ಅಧೀಕ್ಷಕ(ಎಎಸ್‌ಪಿ-ನಗರ) ರಮಾನಂದ್ ಪ್ರಸಾದ್ ಕುಶ್ವಾಹ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ, ಮೂರು ದಿನಗಳ ಹಿಂದೆ, ಕ್ಯಾಂಪಸ್‌ನಲ್ಲಿ ಸೆಲ್ ಫೋನ್ ಬಳಸುವುದನ್ನು ನಿಷೇಧಿಸಿರುವುದರಿಂದ ಶಿಕ್ಷಕರು ಹಲವಾರು ವಿದ್ಯಾರ್ಥಿಗಳ ಮೊಬೈಲ್ ಫೋನ್‌ ಗಳನ್ನು ವಶಪಡಿಸಿಕೊಂಡರು. ಈ ನಡೆಯಿಂದ ಕೋಪಗೊಂಡ ಹುಡುಗನೊಬ್ಬ ಶಿಕ್ಷಕನ ಮೇಲೆ ಹಲ್ಲೆ ನಡೆಸಿದ್ದಾನೆ. ಅವರು ಗುರುವಾರ ಹಾಜರಾತಿ ತೆಗೆದುಕೊಳ್ಳುವಾಗ ಚಾಕುವಿನಿಂದ ಇರಿದಿದ್ದಾನೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿಕ್ಷಕನ ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ಆರೋಪಿ ವಿದ್ಯಾರ್ಥಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಅಪರಾಧಕ್ಕೆ ಬಳಸಿದ್ದ ಚಾಕುವನ್ನು ವಶಪಡಿಸಿಕೊಳ್ಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular