HomeKarnatakaBREAKING NEWS: ಮತ್ತೊಂದು ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸಾವು

BREAKING NEWS: ಮತ್ತೊಂದು ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸಾವು

ಕಾರವಾರ: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್ ನಲ್ಲಿ ನಡೆದಿದೆ.

ಕಾರು ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಕಾರಿನಲ್ಲಿದ್ದ ಪತಿ ವೆಂಕಟೇಶ್, ಪತ್ನಿ ಚೈತ್ರಾ ಹಾಗೂ 7 ತಿಂಗಳ ಮಗು ಶ್ರೀಹಾನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಾರು ಚಾಲಕ ಶ್ರೀಕಾಂತ್ ರೆಡ್ಡಿ ಗಂಭೀರವಾಗಿ ಗಾಯಗೊಂಡಿದ್ದು, ಯಲ್ಲಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular