ಕಾರವಾರ: ಚಾಲಕನ ನಿಯಂತ್ರಣತಪ್ಪಿ ಮರಕ್ಕೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ದಾಂಡೇಲಿ ಬಳಿ ಕರ್ಕಾ ಕ್ರಾಸ್ ನಲ್ಲಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಫಾರೂಖ್ ಸಾಬ್, ಮುದಸೀರ್ ಇಸ್ಮಾಯಿಲ್ ಮುಲ್ಲಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಾಂಡೇಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

