BREAKING NEWS: ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣ: 7 ಜನರು ದುರ್ಮರಣ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಹಿತಿ ನೀಡಿದ್ದು, ಭಾರಿ ಮಳೆಯಿಂದಾಗಿ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ಹೆದ್ದಾರಿಯಲ್ಲಿ ಗುಡ್ಡ ಕುಸಿತವಾಗಿದ್ದು, ಘಟನೆಯಲ್ಲಿ 7 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

ಗುಡ್ಡದ ಮಣ್ಣಿನಡಿ ಸಿಲುಕಿ 7 ಜನರು ಮೃತಪಟ್ಟಿರುವುದು ದೃಢವಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಶಿರೂರು ಬಳಿ ಹೆದ್ದಾರಿಯಲ್ಲಿ ಮಳೆ ಅಬ್ಬರಕ್ಕೆ ಗುಡ್ಡ ಕುಸಿತ ಸಂಭವಿಸಿ 9 ಜನರು ನಾಪತ್ತೆಯಾಗಿದ್ದರು. ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿತ್ತು. ಇದೀಗ 9 ಜನರಲ್ಲಿ 7 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಗುಡ್ಡ ಕುಸಿತದ ವೇಳೆ ಗ್ಯಾಸ್ ಟ್ಯಾಂಕರ್ ಒಂದು ನದಿಗೆ ಉರುಳಿ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಇನ್ನಷ್ಟು ಆತಂಕ ಸೃಷ್ಟಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read