BREAKING NEWS: ಉತ್ತರ ಕನ್ನಡದಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವ ಬಲಿ; 47 ಜನರಿಗೆ ಸೋಂಕು

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು, ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾರೆ.

ಜಿಲ್ಲೆಯ ಶಿರಸಿ ತಾಲೂಕಿನ ಹತ್ತರಗಿ ನವಿಲಗಾರ ಗ್ರಾಮದ ವೃದ್ಧ ರಾಮಚಂದ್ರಗೌಡ (68) ಮೃತರು. ಈ ಮೂಲಕ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮೃತಪಟ್ಟವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.

ಮಂಗನ ಕಾಯಿಲೆ ಸೋಂಕಿನಿಂದ ಬಳಲುತ್ತಿದ್ದ ರಾಮಚಂದ್ರ ಅವರನ್ನು ಉಡುಪಿ ಜಿಲ್ಲೆಯ ಮಣಿಪಾಲ್ ಆಸ್ಪತ್ರೆಗೆದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಈವರೆಗೆ 47 ಜನರಿಗೆ ಕೆ ಎಫ್ ಡಿ ಸೋಂಕು ತಗುಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read