BIG NEWS: ಗುಡ್ಡ ಕುಸಿಯುವ ಭೀತಿ: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ವಾಹನ ನಿಲುಗಡೆಗೆ ನಿರ್ಬಂಧ

ಕಾರವಾರ: ರಾಜ್ಯಾದ್ಯಂತ ಮುಂಗಾರು ಮಳೆ ಅಬ್ಬರ ಜೋರಾಗಿದೆ. ಕರಾವಳಿ ಹಾಗೂ ಪಶ್ಚಿಮ ಘಟ್ಟ ಭಾಗದಲ್ಲಿ ಮಳೆಯ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಇನ್ನೊಂದೆಡೆ ಭೂಕುಸಿತವಾಗುತ್ತಿದ್ದು, ಆತಂಕ ಎದುರಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಹೆದ್ದಾರಿಗಳಲ್ಲಿ ಭೂಕುಸಿತವಾಗುವ ಸಾಧ್ಯತೆ ಹೆಚ್ಚಿದೆ. ಭೂಕುಸಿತವಾಗಬಹುದಾದ ಕೆಲ ಪ್ರದೇಶಗಳನ್ನು ಜಿಲ್ಲಾಡಳಿತ ಗುರುತಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಈ ಭಾಗದಲ್ಲಿ ವಾಹನ ನಿಲುಗಡೆ ಮಾಡದಂತೆ ನಿರ್ಬಂಧ ಹೇರಲಾಗಿದೆ.

ಉತ್ತರ ಕನ್ನಡದ ಶಿರಾಡಿ ಘಾಟ್ ನಲ್ಲಿ ಸಂಭವಿಸಿದ ಭ್ಕುಸಿತದ ಬಳಿಕ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಸಂಭಾವ್ಯ ಅಪಾಯಕರ ಜಾಗಗಳನ್ನು ಗುರುತಿಸಿದೆ. 439 ಸ್ಥಳಗಳಲ್ಲಿ ಭೂಕುಸಿತವಾಗುವ ಸಾಧ್ಯತೆ ಇದೆ.ಈ ಪೈಕಿ 19 ಸ್ಥಳಗಳು ಸೂಕ್ಷ್ಮ ಪ್ರದೇಶಗಳಾಗಿದ್ದು, ಹೆದ್ದಾರಿ ಪಕ್ಕದಲ್ಲಿವೆ.

ಈ 19 ಸ್ಥಳಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಬಗ್ಗೆ ವಾಹನಸವಾರರು ಸಾರ್ವಜನಿಕರು ಮುಂಜಾಗೃತವಹಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read