HomeKarnatakaಕೊಟ್ಟ ಸಾಲ ವಾಪಸ್ ಬರದೇ ಪರದಾಟ: ಕಾಲೇಜು ಶುಲ್ಕ ಪಾವತಿಸಲಾಗದೇ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಕೊಟ್ಟ ಸಾಲ ವಾಪಸ್ ಬರದೇ ಪರದಾಟ: ಕಾಲೇಜು ಶುಲ್ಕ ಪಾವತಿಸಲಾಗದೇ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಕಾರವಾರ: ಪರಿಚಿತರೊಬ್ಬರಿಗೆ ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡದಲ್ಲಿ ನಡೆದಿದೆ.

ಕಾಲೇಜು ಶುಲ್ಕ ಕಟ್ಟಲು ತಂದೆ ನೀಡಿದ್ದ 10 ಸಾವಿರ ರೂಪಾಯಿ ಹಣವನ್ನು ಯುವತಿ ಪರಿಚಯಸ್ಥರಿಗೆ ಸಾಲವಾಗಿ ನೀಡಿದ್ದಳು. ಆ ಹಣ ಮರಳಿ ಸಿಗದ ಕಾರಣ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಭಟ್ಕಳದಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದ ಗಾಯತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಕಾಲೇಜು ಶುಲ್ಕ ಪಾವತಿಸಲು ತಂದೆ ನಾಗರಾಜ ಲಚ್ಚಯ್ಯ ನಾಯ್ಕ ಮಗಳು ಗಾಯತ್ರಿಗೆ 10 ಸಾವಿರ ರೂಪಾಯಿ ನೀಡಿದ್ದರು. ಇದೇ ವೇಳೆ ಊರಿನ ಪರಿಚಯಸ್ಥ ಸಂತೋಷ ಮಾಧೇವ ನಾಯ್ಕ ಎಂಬಾತ ನಿಗದಿತ ಸಮಯಕ್ಕೆ ಮರಳಿ ನೀಡುವುದಾಗಿ ಹೇಳಿ ಆಕೆಯಿಂದ 10 ಸಾವಿರ ರೂಪಾಯಿ ಸಾಲ ಪಡೆದಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾಲವಾಗಿ ಪಡೆದ ಹಣವನ್ನು ಆತ ನಿಗದಿತ ಸಮಯ ಕಳೆದರೂ ಮರಳಿ ನೀಡಿರಲಿಲ್ಲ. ಇದರಿಂದ ಗಾಯತ್ರಿಗೆ ಕಾಲೇಜು ಶುಲ್ಕ ಪಾವತಿಸಲು ಹಣವಿಲ್ಲದೇ ಪರದಡಿದ್ದಾಳೆ. ಶುಲ್ಕ ಕಟ್ಟದ ಕಾರಣ ಪರೀಕ್ಷೆಯ ಹಾಲ್‌ಟಿಕೆಟ್ ಕೂಡ ದೊರೆತಿರಲಿಲ್ಲ. ಇದರಿಂದ ಮನನೊಂದ ಗಾಯತ್ರಿ ಗ್ರಾಮದ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಘಟನೆ ಸಂಬಂಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular