HomeLatest NewsBREAKING NEWS: ಕಾಲುಜಾರಿ ಕಾಳಿ ನದಿಗೆ ಬಿದ್ದ ಯುವಕ ನಾಪತ್ತೆ

BREAKING NEWS: ಕಾಲುಜಾರಿ ಕಾಳಿ ನದಿಗೆ ಬಿದ್ದ ಯುವಕ ನಾಪತ್ತೆ

ಕಾರವಾರ: ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಹಲವು ಅನಾಹುತಗಳು ಸಂಭವಿಸುತ್ತಿವೆ. ಒಂದೆಡೆ ಮಳೆಯ ಅಬ್ಬರ ಮತ್ತೊಂದೆಡೆ ಗುಡ್ದ ಕುಸಿಯುವ ಭೀತಿ ಎದುರಾಗಿದೆ. ಈ ನಡುವೆ ಕಾಲು ಜಾರಿ ಕಾಳಿನದಿಗೆ ಬಿದ್ದು ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಸ್ಂಕೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಂತೋಷ್ ರಾಯ್ಕರ್ (35) ನಾಪತ್ತೆಯಾಗಿರುವ ಯುವಕ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾತ್ರಿ ಸುಂಕೇರಿ ಗ್ರಾಮದ ಸೇತುವೆ ಬಳಿ ಯುವಕ ಕಾಲು ಜಾರಿ ಕಾಳಿ ನದಿಗೆ ಬಿದ್ದಿದ್ದಾನೆ. ಸ್ಥಳೀಯರು, ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಯುವಕನಿಗಾಗಿ ಶೋಧ ನಡೆಸಿದ್ದಾರೆ. ರಬ್ಬರ್ ಬೋಟ್ ಸಹಾಯದಿಂದ ನದಿಯ ಹಿನ್ನೀರಿನಲ್ಲಿ ಹುಡುಕಾಟ ನಡೆಸಲಾಗುತ್ತಿದೆ.

ಕಾರವಾರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular