HomeKarnatakaBIG NEWS: ಸೀಬರ್ಡ್ ಬಸ್ ಭೀಕರ ಅಪಘಾತ: ಓರ್ವ ಪ್ರಯಾಣಿಕ ಸಾವು: 9 ಜನರ ಸ್ಥಿತಿ...

BIG NEWS: ಸೀಬರ್ಡ್ ಬಸ್ ಭೀಕರ ಅಪಘಾತ: ಓರ್ವ ಪ್ರಯಾಣಿಕ ಸಾವು: 9 ಜನರ ಸ್ಥಿತಿ ಗಂಭೀರ

ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಸೀಬರ್ಡ್ ಬಸ್ ರಸ್ತೆ ಮಧ್ಯೆಯೇ ಪಲ್ಟಿಯಾಗಿ ಬಿದ್ದ ಪರಿಣಾಮ ಓರ್ವ ಪ್ರಯಾಣಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಈ ಅಪಘಾತ ಸಂಭವಿಸಿದೆ.

ಬಳ್ಳಾರಿಯಿಂದ ಗೋವಾ ಕಡೆಗೆ ತೆರಳುತ್ತಿದ್ದ ಸೀಬರ್ಡ್ ಸಂಸ್ಥೆಗೆ ಸೇರಿದ ಖಾಸಗಿ ಲಕ್ಸುರಿ ಬಸ್, ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 52ರ ಕಂಚಿನಬಾಗಿಲು ಬಳಿ ರಸ್ತೆಗೆ ಅಡ್ಡಲಾಗಿ ಪಲ್ಟಿಯಾಗಿದೆ. ಅಪಘಾತದಲ್ಲಿ ಓರ್ವ ಪ್ರಯಾಣಿಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಸ್ಸಿನಲ್ಲಿದ್ದ ಒಟ್ಟು 36 ಪ್ರಯಾಣಿಕರ ಪೈಕಿ 21 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ 9 ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿದ್ರೆ ತೂಕಡಿಸಿದ ಕಾರಣ ಚಾಲಕನಿಗೆ ಬಸ್ ನಿಯಂತ್ರಣ ತಪ್ಪಿರಬಹುದು ಎಂದು ಶಂಕಿಸಲಾಗಿದೆ. ವೇಗವಾಗಿ ಬಂದ ಬಸ್ ಹೆದ್ದಾರಿಯ ಮಧ್ಯದಲ್ಲೇ ಪಲ್ಟಿಯಾಗಿದೆ. ಅಪಘಾತದಿಂದಾಗಿ ಹೆದ್ದಾರಿಯ ಎರಡೂ ಬದಿಗಳಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತು ಭಾರಿ ಟ್ರಾಫಿಕ್ ಜಾಮ್ ಉಂಟಾದ ಘಟನೆಯೂ ನಡೆದಿದೆ.

ಅಂಕೋಲಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ತಕ್ಷಣವೇ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಬಸ್ಸಿನ ಕಿಟಕಿ ಗಾಜುಗಳನ್ನು ಒಡೆದು ಒಳಗಿದ್ದ ಪ್ರಯಾಣಿಕರನ್ನು ಹೊರತರಲಾಯಿತು. ಬಳಿಕ ವಾಹನಗಳ ಸುಗಮ ಸಂಚಾರಕ್ಕೆ ಅನುವುಮಾಡಿ ಕೊಡಲಾಯಿತು.

ಗಾಯಗೊಂಡ 21 ಜನರನ್ನು ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಲಾಗಿದೆ. ಅವರಲ್ಲಿ ತಲೆ ಮತ್ತು ಎದೆಗೆ ಬಲವಾದ ಪೆಟ್ಟು ಬಿದ್ದು ಪರಿಸ್ಥಿತಿ ಗಂಭೀರವಾಗಿದ್ದ 9 ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರದ ಕ್ರಿಮ್ಸ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular