BIG NEWS: ಉತ್ತರ ಕನ್ನಡದಲ್ಲಿ ಡೆಂಗ್ಯೂ ಜ್ವರಕ್ಕೆ ಮತ್ತೋರ್ವ ಬಲಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಡೆಂಗ್ಯೂ ಜ್ವರಕ್ಕೆ ಇಂದು ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾರೆ.

ಮೊಹಮ್ಮದ್ ಮೀರಾನ್ ಸಾದಾ (77) ಮೃತರು. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಖಾಜಿಯಾ ಸ್ಟ್ರೀಟ್ ನಿವಾಸಿ. ಕೆಲ ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಿರಾನ್ ಸಾದಾ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನಿನ್ನೆಯಷ್ಟೇ ಡೆಂಗ್ಯೂ ಜ್ವರಕ್ಕೆ ಯುವಕನೊಬ್ಬ ಬಲಿಯಾಗಿದ್ದ.

24 ವರ್ಷದ ಪ್ರಜ್ವಲ್ ಗೋವಿಂದ ಕಾರ್ವಿ ಎಂಬಾತ ನಿನ್ನೆ ಮೃತಪಟ್ಟಿದ್ದರು. ಕಳೆದ ಒಂದು ವರದಿಂದ ಜ್ವರದಿಂದ ಬಳಲುತ್ತಿದ್ದ ಪ್ರಜ್ವಲ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಇಂದು ವೃದ್ಧರೊಬ್ಬರು ಡೆಂಗ್ಯೂಗೆ ಬಲಿಯಾಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read