HomeKarnatakaಕಾಳಿ ಹುಲಿ ಸಂರಕ್ಷಿತಾರಣ್ಯದಲ್ಲಿ ವನ್ಯಜೀವಿಗಳ ಬೇಟೆ: ಗೋವಾ ಸರ್ಕಾರದ ಸಾರಿಗೆ ಸಂಸ್ಥೆಯ ನೌಕರ ಅರೆಸ್ಟ್: ನಾಲ್ವರು...

ಕಾಳಿ ಹುಲಿ ಸಂರಕ್ಷಿತಾರಣ್ಯದಲ್ಲಿ ವನ್ಯಜೀವಿಗಳ ಬೇಟೆ: ಗೋವಾ ಸರ್ಕಾರದ ಸಾರಿಗೆ ಸಂಸ್ಥೆಯ ನೌಕರ ಅರೆಸ್ಟ್: ನಾಲ್ವರು ಎಸ್ಕೇಪ್

ಕಾರವಾರ: ಕಾಳಿ ಹುಲಿ ಸಂರಕ್ಷಿತಾರಣ್ಯದಲ್ಲಿ ಅಕ್ರಮವಾಗಿ ವನ್ಯಜೀವಿಗಳ ಬೇಟೆಯಾಡುತ್ತಿದ್ದ ಗೋವಾ ಸರ್ಕಾರದ ಸಾರಿಗೆ ಸಂಸ್ಥೆಯ ನೌಕರನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೊಯಿಡಾದಲ್ಲಿ ನಡೆದಿದೆ.

ಜೋಯಿಡಾ ತಾಲೂಕಿನ ಬೊಂಡೇಲಿ ಬಳಿ ಕಾಳಿ ಹುಲಿ ಸಂರಕ್ಷಿತಾರಣ್ಯದಲ್ಲಿ ಐವರು ಬೇಟೆಯಾಡುತ್ತಿದ್ದ ವೇಳೆ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಗೋವಾ ಸರ್ಕಾರಿ ಸ್ವಾಮ್ಯದ ಕದಂಬ ಸಾರಿಗೆ ಸಂಸ್ಥೆಯಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿರುವ ಜಯೇಂದ್ರ ದಿಗಂಬರ್ ಗಾವ್ಡೆ (45) ಎಂದು ಗುರುತಿಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಸಿಬ್ಬಂದಿ ಈತನನ್ನು ಬಂಧಿಸಿದ್ದಾರೆ. ಈತನೊಂದಿಗೆ ಬೇಟೆಯಲ್ಲಿ ತೊಡಗಿದ್ದ ಕುಂಬಾರವಾಡ ವಲಯದ ಅರಣ್ಯ ಸಿಬ್ಬಂದಿ, ಬೇಟೆಗೆ ಬಳಸಲಾದ ಬಂದೂಕಿನ ಮಾಲೀಕ ಎನ್ನಲಾದ ಸುಭಾಷ್ ಮಿರಾಶಿ, ಗೋವಾದ ಮೂವರು ಸೇರಿದಂತೆ ನಾಲ್ವರು ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಸದ್ಯ ತಲೆಮರೆಸಿಕೊಂಡಿರುವ ಅವರಿಗಾಗಿ ಅರಣ್ಯ ಸಿಬ್ಬಂದಿ ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಾಳಿಯ ವೇಳೆ ಅಧಿಕಾರಿಗಳು ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಶೆಡ್ಯೂಲ್-II ರ ಅಡಿಯಲ್ಲಿ ಸಂರಕ್ಷಿತ ಪ್ರಭೇದವಾಗಿರುವ ಮರಬೆಕ್ಕಿನ (Palm Civet) ಕಳೇಬರವನ್ನು ವಶಪಡಿಸಿಕೊಂಡಿದ್ದಾರೆ. ಇದನ್ನು ಬಂದೂಕಿನಿಂದ ಶೂಟ್ ಮಾಡಿ ಕೊಲ್ಲಲಾಗಿತ್ತು. ಇದರೊಂದಿಗೆ ಉಡ ಹಾಗೂ ಕಸ್ತೂರಿ ಜಿಂಕೆ ಎಂದು ಶಂಕಿಸಲಾದ ಮತ್ತೊಂದು ಪ್ರಾಣಿಯ ಮಾಂಸವನ್ನು ವಶಕ್ಕೆ ಪಡೆಯಲಾಗಿದ್ದು, ನಿಖರ ಮಾಹಿತಿ ಪತ್ತೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಬೇಟೆಗೆ ಬಳಸಿದ್ದ ಬಂದೂಕನ್ನು ಸಹ ಜಪ್ತಿ ಮಾಡಲಾಗಿದೆ.

ಕೇವಲ 60 ಮನೆಗಳಿರುವ ಬೊಂಡೇಲಿ ಗ್ರಾಮವು ಅಕ್ರಮ ಬೇಟೆಗಾರರ ತಾಣವಾಗುತ್ತಿದೆ ಎಂದು ವನ್ಯಜೀವಿ ಕಾರ್ಯಕರ್ತರು ಕಳವಳ ವ್ಯಕ್ತಪಡಿಸಿದ್ದಾರೆ. ಈ ಗ್ರಾಮ ಗೋವಾ ಗಡಿಗೆ ಹೊಂದಿಕೊಂಡಿರುವ ಗ್ರಾಮವಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular