HomeKarnatakaRAIN ALERT: ಭಾರಿ ಮಳೆ ಮುನ್ಸೂಚನೆ: ನಾಳೆ ಶಿರಸಿ, ಸಿದ್ದಾಪುರ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ...

RAIN ALERT: ಭಾರಿ ಮಳೆ ಮುನ್ಸೂಚನೆ: ನಾಳೆ ಶಿರಸಿ, ಸಿದ್ದಾಪುರ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

ಕಾರವಾರ: ಕರಾವಳಿ ಜಿಲ್ಲೆಗಳಾದ್ಯಂತ ವರುಣಾರ್ಭಟ ಮುಂದುವರೆದಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ನಾಳೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆಯಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿಮುಂಜಾಗ್ರತಾ ಕ್ರಮವಾಗಿ ನಾಳೆ ಶುಕ್ರವಾರ ಜಿಲ್ಲೆಯ ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಶಿರಸಿ, ಸಿದ್ದಾಪುರ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular