ಲಖನೌ: ಕೌಡಿಯಾಲ ನದಿಯಲ್ಲಿ ದೋಣಿ ಮಗುಚಿಬಿದ್ದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಮಕ್ಕಳು ಸೇರಿ 8 ಜನರು ನಾಪತ್ತೆಯಾಗಿದ್ದಾರೆ.
ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಕೌಡಿಯಾಲ ನದಿಯಲ್ಲಿ ಈ ದುರಂತ ಸಂಭವಿಸಿದೆ. ನದಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ನಾಪತ್ತೆಯಾಗಿರುವ 8 ಜನರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಘಟನಾ ಸ್ಥಳದಲ್ಲಿ ಎನ್ ಡಿ ಆರ್ ಎಫ್ ಹಾಗೂ ಎಸ್ ಡಿ ಆರ್ ಎಫ್ ತಂಡ ಬೀಡು ಬಿಟ್ಟಿದ್ದು, ಕಾಣೆಯಾಗಿರುವವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. 22 ಜನರಿದ್ದ ದೋಣಿ ಭರತಪುರಕ್ಕೆ ತೆರಳುತ್ತಿತ್ತು. ಈ ವೇಳೆ ಪ್ರವಾಹದ ಹರಿವಿನಿಂದಾಗಿ ದೋಣಿ ಪಲ್ಟಿಯಾಗಿದೆ. 60 ವರ್ಷದ ಮಹಿಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಐವರು ಮಕ್ಕಳು ಸೇರಿ 8 ಜನರು ಕಣ್ಮರೆಯಾಗಿದ್ದಾರೆ.
