HomeLatest NewsBIG NEWS: ದೋಣಿ ಮಗುಚಿ ಬಿದ್ದು ದುರಂತ: ಓರ್ವ ಮಹಿಳೆ ಸಾವು; ಮಕ್ಕಳು ಸೇರಿ 8...

BIG NEWS: ದೋಣಿ ಮಗುಚಿ ಬಿದ್ದು ದುರಂತ: ಓರ್ವ ಮಹಿಳೆ ಸಾವು; ಮಕ್ಕಳು ಸೇರಿ 8 ಜನರು ನಾಪತ್ತೆ

ಲಖನೌ: ಕೌಡಿಯಾಲ ನದಿಯಲ್ಲಿ ದೋಣಿ ಮಗುಚಿಬಿದ್ದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಮಕ್ಕಳು ಸೇರಿ 8 ಜನರು ನಾಪತ್ತೆಯಾಗಿದ್ದಾರೆ.

ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಕೌಡಿಯಾಲ ನದಿಯಲ್ಲಿ ಈ ದುರಂತ ಸಂಭವಿಸಿದೆ. ನದಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ನಾಪತ್ತೆಯಾಗಿರುವ 8 ಜನರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಘಟನಾ ಸ್ಥಳದಲ್ಲಿ ಎನ್ ಡಿ ಆರ್ ಎಫ್ ಹಾಗೂ ಎಸ್ ಡಿ ಆರ್ ಎಫ್ ತಂಡ ಬೀಡು ಬಿಟ್ಟಿದ್ದು, ಕಾಣೆಯಾಗಿರುವವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. 22 ಜನರಿದ್ದ ದೋಣಿ ಭರತಪುರಕ್ಕೆ ತೆರಳುತ್ತಿತ್ತು. ಈ ವೇಳೆ ಪ್ರವಾಹದ ಹರಿವಿನಿಂದಾಗಿ ದೋಣಿ ಪಲ್ಟಿಯಾಗಿದೆ. 60 ವರ್ಷದ ಮಹಿಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಐವರು ಮಕ್ಕಳು ಸೇರಿ 8 ಜನರು ಕಣ್ಮರೆಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular