HomeIndiaBREAKING NEWS: ಮಸೀದಿ ಸರ್ವೆಗೆ ಆಗಮಿಸಿದ್ದ ಅಧಿಕಾರಿಗಳ ಮೇಲೆ ಕಲ್ಲು ತೂರಾಟ: ಕಾರು, ಬೈಕ್ ಗಳಿಗೆ...

BREAKING NEWS: ಮಸೀದಿ ಸರ್ವೆಗೆ ಆಗಮಿಸಿದ್ದ ಅಧಿಕಾರಿಗಳ ಮೇಲೆ ಕಲ್ಲು ತೂರಾಟ: ಕಾರು, ಬೈಕ್ ಗಳಿಗೆ ಬೆಂಕಿ ಹಚ್ಚಿದ ಉದ್ರಿಕ್ತರು

ಮಸೀದಿ ಸರ್ವೆಗೆ ಬಂದಿದ್ದ ಅಧಿಕಾರಿಗಳ ಮೇಲೆ ಉದ್ರಿಕ್ತರ ಗುಂಪು ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್ ನಲ್ಲಿ ನಡೆದಿದೆ.

ಈಗ ಜಾಮಾ ಮಸೀದಿ ಇರುವ ಜಾಗ ಹಿಂದೆ ಹರಿಹರ ದೇವಸ್ಥಾನವಾಗಿತ್ತು ಎಂದು ಅರ್ಜಿ ಸಲ್ಲಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಇಂದು ಸರ್ವೆಗೆ ಆಗಮಿಸಿದ್ದರು. ಈ ವೇಳೆ ಕೆಲ ಕಿಡಿಗೇಡಿಗಳು ಅಧಿಕಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಉದ್ರಿಕ್ತರನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ.

ಈ ವೇಳೆ ಪರಿಸ್ಥಿತಿ ಇನ್ನಷ್ಟು ಉದ್ವಿಗ್ನಗೊಂಡಿದ್ದು, ಉದ್ರಿಕ್ತರ ಗುಂಪು ರಸ್ತೆ ಬದಿ ನಿಲ್ಲಿಸಿದ್ದ ಕಾರು, ಬೈಕ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular