BIG NEWS: ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: ನಾಲ್ವರು ಮಹಿಳೆಯರು ಸಾವು

ಲಕ್ನೋ: ಪಟಾಕಿ ಕಾರ್ಖಾನೆಯಲ್ಲಿ ಸ್ಫೊಟ ಸಂಭವಿಸಿ ನಾಲ್ವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ನಡೆದಿದೆ.

ಅಮ್ರೋಹಾ ಜಿಲ್ಲೆಯ ರಾಜಬ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಕಾರದಿಂದ ಪರವನಗಿ ಪಡೆದಿರುವ ಪಟಾಕಿ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಅಮ್ರೋಹಾ ಎಸ್ ಪಿ ಅಮಿತ್ ಕುಮಾರ್ ಆನಂದ್ ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕಾರ್ಖಾನೆ ಸೈಫ್ ಉರ್ ರೆಹಮಾನ್ ಹೆಸರಿನಲ್ಲಿ ನೊಂದಣಿಯಾಗಿದ್ದು, ಏಕಾಏಕಿ ಇಂದು ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read