HomeLatest NewsBIG NEWS: ಉತ್ತರಾಖಂಡದ ಸೇನಾ ಕ್ಯಾಂಪ್ ನಲ್ಲಿ ಭಾರಿ ಬೆಂಕಿ ಅವಘಡ

BIG NEWS: ಉತ್ತರಾಖಂಡದ ಸೇನಾ ಕ್ಯಾಂಪ್ ನಲ್ಲಿ ಭಾರಿ ಬೆಂಕಿ ಅವಘಡ

ಡೆಹ್ರಾಡೂನ್: ಉತ್ತರಾಖಂಡದಲ್ಲಿರುವ ಸೇನಾ ಕ್ಯಾಂಪ್ ನಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದೆ. ಏಕಾಏಕಿ ಆರ್ಮಿ ಕ್ಯಾಂಪ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಧಗಧಗನೆ ಹೊತ್ತಿ ಉರಿದಿದೆ.

ಉತ್ತರಾಖಂಡದ ಜೋಶಿ ಮಠದ ಔಲಿ ರಸ್ತೆಯಲ್ಲಿರುವ ಸೇನಾ ಶಿಬಿರದ ಅಂಗಡಿಯೊಂದಲ್ಲಿ ಈ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿಗಳು ಸೇನಾ ಕ್ಯಾಪ್ ಗೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಸದ್ಯ ಬೆಂಕಿ ನಂದಿಸಲಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಳೆದ ವರ್ಷ ಮೇ ತಿಂಗಳಲ್ಲಿ ಲೇಹ್ ನ ಡಿಗ್ರಿ ಕಾಲೇಜು ಬಳಿಯ ಸೇನಾ ಕ್ಯಾಂಪ್ ನಲ್ಲಿ ಕೂಡ ಅಗ್ನಿ ಅವಘಡ ಸಂಭವಿಸಿತ್ತು. ಇದೀಗ ಉತ್ತರಾಖಂಡದ ಸೇನಾ ಕ್ಯಾಂಪ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular