14 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಬಿಜೆಪಿ ಮುಖಂಡ ಅರೆಸ್ಟ್

ಡೆಹ್ರಾಡೂನ್: 14 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಿಜೆಪಿ ಬ್ಲಾಕ್ ಮುಖ್ಯಸ್ಥನನ್ನು ಬಂಧಿಸಲಾಗಿದೆ ಎಂದು ಉತ್ತರಾಖಂಡ್ ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಆರೋಪಿ, ಅಲ್ಮೋರಾ ಜಿಲ್ಲೆಯ ಬಿಜೆಪಿ ಬ್ಲಾಕ್ ಮುಖ್ಯಸ್ಥ ಭಗವತ್ ಸಿಂಗ್ ಬೋರಾ ಶುಕ್ರವಾರ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅವರನ್ನು ಶನಿವಾರ ರಾತ್ರಿ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಎಸ್‌ಪಿ) ದೇವೇಂದ್ರ ಪಿಂಚಾ ತಿಳಿಸಿದ್ದಾರೆ,

ಅವರು ಓಡಿಹೋಗುತ್ತಿದ್ದಾಗ ನಾವು ಬಂಧಿಸಿದ್ದೇವೆ. ಆತನನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ಕೋರುತ್ತೇವೆ. ಶುಕ್ರವಾರ ಜಿಲ್ಲಾ ಮ್ಯಾಜಿಸ್ಟ್ರೇಟ್(ಡಿಎಂ) ಆದೇಶದ ಮೇರೆಗೆ ಕಂದಾಯ ಅಧಿಕಾರಿಗಳು ಪ್ರಥಮ ಮಾಹಿತಿ ವರದಿ(ಎಫ್‌ಐಆರ್) ದಾಖಲಿಸಿದ್ದು, ಪ್ರಕರಣವನ್ನು ಸಾಮಾನ್ಯ ಪೊಲೀಸರಿಗೆ ವರ್ಗಾಯಿಸಿದ್ದಾರೆ ಎಂದು ಎಸ್‌ಎಸ್‌ಪಿ ಹೇಳಿದ್ದಾರೆ.

ಪೊಲೀಸರ ಪ್ರಕಾರ, ಘಟನೆ ಆಗಸ್ಟ್ 24 ರಂದು ನಡೆದಿತ್ತು. ಆದರೆ, ಆರು ದಿನಗಳ ನಂತರ ಆಗಸ್ಟ್ 30 ರಂದು ದೂರು ಸ್ವೀಕರಿಸಲಾಗಿದೆ. ಬೋರಾ ವಿರುದ್ಧ ಭಾರತೀಯ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತನ್ನ ಮಗಳು ತನ್ನ ಸಹೋದರರೊಂದಿಗೆ ಮೇಕೆ ಮೇಯಿಸಲು ಸಮೀಪದ ಕಾಡಿಗೆ ಹೋಗಿದ್ದಳು. ಅಲ್ಲಿಗೆ ಆಗಮಿಸಿದ ಭಗವತ್ ಸಿಂಗ್ ಬೋರಾ ತನ್ನ ಮಗಳಿಗೆ ಚಾಕಲೇಟ್ ಆಮಿಷ ಒಡ್ಡಿ ಕಿರುಕುಳ ನೀಡಿದ್ದಾರೆ ಎಂದು ಅಪ್ರಾಪ್ತ ಬಾಲಕಿಯ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ.

ಕಿರುಕುಳದ ಆರೋಪವಿದೆ. ನ್ಯಾಯಾಲಯ, ವೈದ್ಯರು ಮತ್ತು ಮಕ್ಕಳ ಕಲ್ಯಾಣ ಸಮಿತಿ(ಸಿಡಬ್ಲ್ಯೂಸಿ) ಮುಂದೆ ನೀಡಿದ ಹೇಳಿಕೆಯಲ್ಲಿ ಮಹಿಳೆ ಅತ್ಯಾಚಾರದ ಆರೋಪಗಳನ್ನು ನಿರಾಕರಿಸಿದ್ದಾರೆ. ಬಾಲಕಿಯ ವೈದ್ಯಕೀಯ ಪರೀಕ್ಷೆಯನ್ನು ಈಗಾಗಲೇ ನಡೆಸಲಾಗಿದೆ. ಮಹಿಳಾ ಸಬ್ ಇನ್ಸ್‌ ಪೆಕ್ಟರ್ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ ಎಂದು ಎಸ್‌ಎಸ್‌ಪಿ ಹೇಳಿದ್ದಾರೆ.

ಏತನ್ಮಧ್ಯೆ, ಬಿಜೆಪಿ ಈ ಘಟನೆಯನ್ನು ದುರದೃಷ್ಟಕರ ಎಂದು ಬಣ್ಣಿಸಿದೆ ಮತ್ತು ಬೋರಾ ಅವರನ್ನು ಪಕ್ಷದಿಂದ ಹೊರಹಾಕಿದೆ. ನಾವು ಆರೋಪಿಯನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಹೊರಹಾಕಿದ್ದೇವೆ. ಮಹಿಳೆಯರ ವಿರುದ್ಧದ ಅಪರಾಧಗಳನ್ನು ಎದುರಿಸುವಲ್ಲಿ ನಮ್ಮ ಸರ್ಕಾರ ಶೂನ್ಯ ಸಹಿಷ್ಣು ನೀತಿಯನ್ನು ಹೊಂದಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಮಹೇಂದ್ರ ಭಟ್ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read