HomeLatest NewsBIG NEWS: ಮತ್ತೊಂದು ಭೀಕರ ಅಪಘಾತ: ಕಂದಕಕ್ಕೆ ಉರುಳಿದ ಬಸ್: ಸ್ಥಳದಲ್ಲೇ ಐವರು ಸಾವು

BIG NEWS: ಮತ್ತೊಂದು ಭೀಕರ ಅಪಘಾತ: ಕಂದಕಕ್ಕೆ ಉರುಳಿದ ಬಸ್: ಸ್ಥಳದಲ್ಲೇ ಐವರು ಸಾವು

ಡೆಹ್ರಾಡೂನ್: ಪ್ರಯಾಣಿಕರ ಬಸ್ ವೊಂದು 70 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಘಟನೆ ಉತ್ತರಾಖಂಡದ ತೆಹ್ರಿ ಜಿಲ್ಲೆಯ ಕುಂಜಾಪುರಿ-ಹಿಂಡೋಲಖಲ್ ಬಳಿ ನಡೆದಿದೆ.

ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ. 23 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಋಷಿಕೇಶ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ದುರಂತಕ್ಕೆ ಸಂಬಂಧಿಸಿದಂತೆ ಸಿಎಂ ಪುಷ್ಕರ್ ಸಿಂಗ್ ಧಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳದಲ್ಲಿ ಜಿಲ್ಲಾಡಳಿತ ಹಾಗೂ ಎಸ್ ಡಿ ಆರ್ ಎಫ್ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular