HomeIndiaBIG NEWS: ಕುಡಿದ ಮತ್ತಿನಲ್ಲಿ ಕಾರ್ ರೇಸ್: ಭೀಕರ ಅಪಘಾತದಲ್ಲಿ 6 ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

BIG NEWS: ಕುಡಿದ ಮತ್ತಿನಲ್ಲಿ ಕಾರ್ ರೇಸ್: ಭೀಕರ ಅಪಘಾತದಲ್ಲಿ 6 ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ಟ್ರಕ್ ಹಾಗೂ BMW ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನ ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ಡೆಹ್ರಾಡೂನ್ ನಲ್ಲಿ ನಡೆದಿದೆ.

ವಿದ್ಯಾರ್ಥಿಗಳು ಕಂಠಪೂರ್ತಿ ಕುಡಿದು, ಅಮಲಿನಲ್ಲಿ ಕಾರ್ ರೇಸ್ ಮಡುತ್ತಿದ್ದರು ಎನ್ನಲಾಗಿದೆ. ಕಾರು ಮುಂದೆ ಸಾಗುತ್ತಿದ್ದ ಟ್ರಕ್ ಗೆ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ವಿದ್ಯಾರ್ಥಿಗಳು ಚಲ್ಲಾಪಿಲ್ಲಿಯಾಗಿ ಬಿದ್ದಿದ್ದಾರೆ. ಕೆಲ ವಿದ್ಯಾರ್ಥಿಗಳ ರುಂಡ-ಮುಂಡ ಬೇರ್ಪಟ್ಟು ಬಿದ್ದಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದ 6 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ತಡರಾತ್ರಿ ಪಾರ್ಟಿ ಮಾಡಿ ಕುಡಿದ ಮತ್ತಿನಲ್ಲಿ ಕಾರು ಚಲಾವಣೆ ಮಾಡಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular