HomeIndiaವಾಕಿಂಗ್ ಮಾಡುವಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ 14 ವರ್ಷದ ಬಾಲಕ: ಮಗನ ಸಾವಿನಿಂದ ನೊಂದ ತಾಯಿ...

ವಾಕಿಂಗ್ ಮಾಡುವಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ 14 ವರ್ಷದ ಬಾಲಕ: ಮಗನ ಸಾವಿನಿಂದ ನೊಂದ ತಾಯಿ ನದಿಗೆ ಹಾರಿ ಆತ್ಮಹತ್ಯೆ

ಡೆಹ್ರಾಡೂನ್: ಇತ್ತೀಚಿನ ದಿನಗಳಲ್ಲಿ ಹಠಾತ್ ಹೃದಯಾಘಾತದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಹೃದದಯಗಹಾತಕ್ಕೆ ಚಿಕ್ಕಮಕ್ಕಳು ಕೂಡ ಬಲಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಇಲ್ಲೊಂದು ಘಟನೆಯಲ್ಲಿ 14 ವರ್ಷದ ಬಾಲಕನೊಬ್ಬ ವಾಕಿಂಗ್ ಮಾಡುತ್ತಿರುವಾಗಲೇ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.

ಉತ್ತರಾಖಂಡದ ಗಡಿ ಜಿಲ್ಲೆಯಾದ ಪಿಥೋರಗಢದಲ್ಲಿ ಈ ಘಟನೆ ನಡೆದಿದೆ. ವಾಕಿಂಗ್ ಗೆ ಹೋಗಿದ್ದ 14 ವರ್ಷದ ಬಾಲಕ ಮೈದಾನದಲ್ಲೇ ಕುಸಿದುಬಿದ್ದು ಹಠಾತ್ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ. ಮಗನ ಸಾವು ಕಂಡು ಆಘಾತಕ್ಕೊಳಗಾದ ತಾಯಿ ಸರಯೂ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಡೆ ಗ್ರಾಮದಲ್ಲಿ ನಡೆದ ಈ ಘಟನೆ ಇಡೀ ಗ್ರಾಮಸ್ಥರನ್ನು ಫ಼್ದು:ಖದ ಮಡುವಿನಲ್ಲಿ ಮುಳುಗಿಸಿದೆ. ಮಡೆ ಗ್ರಾಮದ 14ವರ್ಷದ ಜತಿನ್ ಜೋಶಿ ಬೆಳಗ್ಗೆ 6 ಗಂಟೆಗೆ ಝೌಲ್ಖೇತ್ ಕ್ರೀಡಾಂಗಣದಲ್ಲಿ ಎಂದಿನಂತೆ ರನ್ನಿಂಗ್ ಮುಗಿಸಿ ಕುಳಿತಿದ್ದಾಗ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ತಾಯಿ ಪೂನಂ ಜೋಶಿ ತಕ್ಷಣ ಆತನನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದರಾದರೂ, ಆತ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು. ಪ್ರಾಥಮಿಕ ವರದಿಗಳ ಪ್ರಕಾರ ಹೃದಯಾಘಾತವೇ ಸಾವಿಗೆ ಕಾರಣವೆಂದು ಹೇಳಲಾಗುತ್ತಿದೆ.

ಪುತ್ರನ ಮರಣದಿಂದ ಆಘಾತಕ್ಕೊಳಗಾದ ತಾಯಿ ಪೂನಂ, ಆಸ್ಪತ್ರೆಯಿಂದ ಮನೆಗೆ ಮರಳುವ ಬದಲು ಗಂಗೋಲಿಹಾಟ್ ಕಡೆಗೆ ತೆರಳುತ್ತಿದ್ದ ಟ್ಯಾಕ್ಸಿ ಹತ್ತಿದ್ದಾರೆ. ಸುಮಾರು 30 ಕಿ.ಮೀ ದೂರದ ಘಾಟ್ ಸೇತುವೆ ಬಳಿ ಕಾರು ನಿಲ್ಲಿಸಲು ಹೇಳಿ, ನೋಡನೋಡುತ್ತಿದ್ದಂತೆಯೇ ಸರಯು ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಟ್ಯಾಕ್ಸಿ ಚಾಲಕ ಮತ್ತು ಸ್ಥಳೀಯರು ಆಕೆಯನ್ನು ಉಳಿಸಲು ಯತ್ನಿಸಿದರೂ ನದಿಯ ರಭಸಕ್ಕೆ ಕೊಚ್ಚಿಹೋಗಿದ್ದರು. ತಕ್ಷಣವೇ ಸ್ಥಳಕ್ಕಾಗಮಿಸಿದ ರಾಜ್ಯ ವಿಪತ್ತು ಸ್ಪಂದನಾ ಪಡೆ ಮತ್ತು ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿ ಆಕೆಯ ಮೃತದೇಹವನ್ನು ಹೊರತೆಗೆದಿದ್ದಾರೆ.

ಪೂನಂ ಅವರ ಪುತ್ರಿ ಕೇವಲ ಎರಡು ವರ್ಷಗಳ ಹಿಂದೆಯಷ್ಟೇ ಮೃತಪಟ್ಟಿದ್ದರು. ಇದೀಗ ಏಕೈಕ ಆಧಾರವಾಗಿದ್ದ ಮಗನೂ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ. ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಗೆ ತಾಯಿಗೆ ಬದುಕಿನ ಭರವಸೆಯೇ ಹೊರಟು ಹೋಗಿದೆ. ತೀವ್ರವಾಗಿ ಮನನೊಂದ ಮಹಿಳೆ ಆಸ್ಪತ್ರೆಯಿಂದ ಮನೆಗೆ ಬರುವ ಬದಲು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪೊಲೀಸರು ತಾಯಿ ಮತ್ತು ಮಗ ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದು, ಘಟನೆ ಕುರಿತು ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular