HomeLatest NewsBIG NEWS: ಭಾರಿ ಮಳೆ ಮುನ್ಸೂಚನೆ: ಚಾರ್ ಧಾಮ್ ಯಾತ್ರೆ ತಾತ್ಕಾಲಿಕ ಸ್ಥಗಿತ; ಯಾತ್ರಿಕರಿಗೆ ಸುರಕ್ಷಿತ...

BIG NEWS: ಭಾರಿ ಮಳೆ ಮುನ್ಸೂಚನೆ: ಚಾರ್ ಧಾಮ್ ಯಾತ್ರೆ ತಾತ್ಕಾಲಿಕ ಸ್ಥಗಿತ; ಯಾತ್ರಿಕರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ

ಡೆಹ್ರಾಡೂನ್: ಉತ್ತರಾಖಂಡದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಇಂದು ಉತ್ತರಾಖಂಡದಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಚಾರ್ ಧಾಮ್ ಯಾತ್ರೆಯನ್ನು ಒಂದು ದಿನದ ಮಟ್ಟಿಗೆ ಸ್ಥಗಿತಗೊಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹರಿದ್ವಾರ, ಋಷಿಕೇಶ, ಶ್ರೀನಗರ, ರುದ್ರಪ್ರಯಾಗ, ಸೋನ್ ಪ್ರಯಾಗ್ ಮತ್ತು ವಿಕಾಸನಗರಗಳಲ್ಲಿ ಯಾತ್ರಿಕರನ್ನು ತಡೆಯಲು ಪೊಲೀಸರು ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗರ್ವಾಅಲ್ ವಿಭಾಗದ ಪೊಲೀಸ್ ಆಯುಕ್ತ ವಿನಯ್ ಶಂಕರ್ ಪಾಂಡೆ ತಿಳಿಸಿದ್ದಾರೆ.

ಯಾತ್ರಿಕರಿಗೆ ಮಾರ್ಗಮಧ್ಯೆಯೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದ್ದು, ಯಾತ್ರಿಕರಿಗೆ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಉತ್ತರಾಖಂಡದ ಬಾಲಿಗಢದ ಬಾರ್ಕೋಟ್-ಯಮುನೋತ್ರಿ ರಸ್ತೆಯಲ್ಲಿ ಮೇಘಸ್ಫೋಟ ಸಂಭವಿಸಿದೆ. ಇದರಿಂದಾಗಿ ಹಠಾತ್ ಪ್ರವಾಹ ಉಂಟಾಗಿ ನಿರ್ಮಾಣ ಹಂತದ ಹೋಟೆಲ್ ನಲ್ಲಿದ್ದ 9 ಕಾರ್ಮಿಕರು ನಾಪತ್ತೆಯಾಗಿದ್ದಾರೆ. ಎಸ್ ಡಿ ಆರ್ ಎಫ್, ಎನ್ ಡಿ ಆರ್ ಎಫ್ ತಂಡದಿಂದ ಕಾರ್ಮಿಕರಿಗಾಗಿ ಶೋಧ ನಡೆಸಲಾಗುತ್ತಿದೆ. ಮತ್ತೊಂದೆಡೆ ರಕ್ಷಣಾ ಕಾರ್ಯಾಚರಣೆಯೂ ನಡೆಯುತ್ತಿದೆ ಎಂದು ಉತ್ತರಕಾಶಿ ಜಿಲ್ಲಾಧಿಕಾರಿ ಪ್ರಶಾಂತ್ ಆರ್ಯ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular