ಡೆಹ್ರಾಡೂನ್: ಉತ್ತರಾಖಂಡದಲ್ಲಿ ಭಾರಿ ಹಿಮಪಾತಕ್ಕೆ ಹಿಮ ಪರ್ವತ ಕುಸಿದುಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಮದ ಅಡಿಯಲ್ಲಿ ಸಿಲುಕಿದ್ದ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಉತ್ತರಾಖಂಡದ ಬದರಿನಾಥ ಸೇರಿ ಹಲವೆಡೆ ನಿನ್ನೆ ಭಾರಿ ಹಿಮಪಾತವುಂಟಾಗಿತ್ತು. ಚಮೋಲಿಯ ಮಾನಾ ಬಳಿ ಹೆದ್ದಾರಿ ನಿರ್ಮಾಣ ಕಾಮಗಾರಿ ವೇಳೆಯೆ ಹಿಮಪರ್ವತ ಕುಸಿದು ಬಿದ್ದ ಪರಿಣಾಮ 55 ಕಾರ್ಮಿಕರು ಹಿಮದ ಅಡಿಯಲ್ಲಿ ಸಿಲುಕಿದ್ದರು. ಅವರಲ್ಲಿ 50 ಕಾರ್ಮಿಕರನ್ನು ರಕ್ಷಿಸ ಲಾಗಿತ್ತು. ಗಾಯಾಳುಗಳನ್ನು ಜೋಶಿಮಠದ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾಲ್ವರು ಕಾರ್ಮಿಕರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಇನ್ನೂ ಐವರು ಕಾರ್ಮಿಕರು ಹಿಮದ ಅಡಿಯಲ್ಲಿ ಸಿಲುಕಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚಾರಣೆ ಮುಂದುವರೆದಿದೆ.