ಡೆಹ್ರಾಡೂನ್: ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದಿದ್ದು, ಘಟನೆಯಲ್ಲಿ 7 ಜನರು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ಅಲ್ಮೋರಾದಲ್ಲಿ ನಡೆದಿದೆ.
ಭಿಕಿಯಾಸೈನ್ ಎಂಬಲ್ಲಿ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ 7 ಜನರು ಸಾವನ್ನಪ್ಪಿದ್ದು, 12 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಅಲ್ಮೋರಾದ ದ್ವಾರಹತ್ ನಿಂದ ನೈನಿತಾಲ್ ನ ರಾಮನಗರಕ್ಕೆ ತೆರಳುತ್ತಿತ್ತು. ಈ ವೇಳೆ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ.
ಬಸ್ ನಲ್ಲಿ 19 ಪ್ರಯಾಣಿಕರು ಇದ್ದರು. 7 ಜನರು ಸಾವನ್ನಪ್ಪಿದ್ದು, ಚಾಲಕ ಸೇರಿ 12 ಜನರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

