HomeIndiaBREAKING: ಸುರಂಗದಿಂದ ಕಾರ್ಮಿಕರು ಹೊರ ಬರುತ್ತಿದ್ದಂತೆ ಸಂಭ್ರಮಾಚರಣೆ

BREAKING: ಸುರಂಗದಿಂದ ಕಾರ್ಮಿಕರು ಹೊರ ಬರುತ್ತಿದ್ದಂತೆ ಸಂಭ್ರಮಾಚರಣೆ

 ನವದೆಹಲಿ: ಉತ್ತರಾಖಂಡದ ಉತ್ತರ ಕಾಶಿ ಸಮೀಪ ಸಿಲ್ಕ್ಯಾರಾ ಸುರಂಗದೊಳಗೆ ಸಿಲುಕಿದ್ದ 41 ಕಾರ್ಮಿಕರ ರಕ್ಷಣಾ ಕಾರ್ಯಚರಣೆ ಯಶಸ್ವಿಯಾಗಿದ್ದು, ಕೋಟ್ಯಂತರ ಭಾರತೀಯರ ಪ್ರಾರ್ಥನೆ ಫಲಿಸಿದೆ.

ಎನ್.ಡಿ.ಆರ್.ಎಫ್., ಎಸ್.ಡಿ.ಆರ್.ಎಫ್., ಸೇನೆಯಿಂದ ರಕ್ಷಣಾ ಕಾರ್ಯಚರಣೆ ನಡೆಸಲಾಗಿದ್ದು, ಹಂತ ಹಂತವಾಗಿ ಕಾರ್ಮಿಕರನ್ನು ಹೊರ ತರುವ ಕಾರ್ಯಾಚರಣೆ ಪ್ರಗತಿಯಲ್ಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೊದಲ ಹಾಗೂ ಎರಡನೇ ಹಂತದಲ್ಲಿ ಕಾರ್ಮಿಕರು ಹೊರಬರುತ್ತಿದ್ದಂತೆ ಉತ್ತರಾಖಂಡ್ ಸಿಎಂ ಪುಷ್ಕರ್ ಸಿಂಗ್  ಧಾಮಿ ಹಾಗೂ ಕಾರ್ಮಿಕರ ಸಂಬಂಧಿಕರು ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದ್ದಾರೆ.

ಪ್ರತಿ ಹಂತದಲ್ಲಿಯೂ ನಾಲ್ವರು ಕಾರ್ಮಿಕರನ್ನು ಹೊರತರಲಾಗುತ್ತಿದ್ದು, ನಾಲ್ಕು ಹಂತದ ಕಾರ್ಯಾಚರಣೆ ಪೂರ್ಣಗೊಂಡಿದೆ. ನವೆಂಬರ್ 12ರಿಂದ 41 ಪುರುಷ ಕಾರ್ಮಿಕರು ಸುರಂಗದಲ್ಲಿ ಸಿಲುಕಿದ್ದರು. ರಕ್ಷಣಾ ಸಿಬ್ಬಂದಿ ಹಗಲಿರುಳು ಶ್ರಮಿಸಿ ಹೊರಗೆ ತಂದಿದ್ದಾರೆ. ನಿರ್ಮಾಣ ಹಂತದ ಸುರಂಗ ಕುಸಿದು ಬಿದ್ದಿದ್ದರಿಂದ ಕಾರ್ಮಿಕರು ಸಿಲುಕಿದ್ದರು. ಅವರಿಗೆ ಪೈಪ್ ಮೂಲಕ ಆಹಾರ, ಆಕ್ಸಿಜನ್ ನೀಡಲಾಗಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular