BREAKING NEWS: ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ನಿವಾಸಕ್ಕೆ ಸಿಎಂ ಭೇಟಿ; ಕುತೂಹಲ ಕೆರಳಿಸಿದ ಸಿದ್ದರಾಮಯ್ಯ ನಡೆ…!

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಇಂದು ಮೈಸೂರು ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ನಿವಾಸಕ್ಕೆ ಭೇಟಿ ನೀಡಿದ್ದು, ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಜಯಲಕ್ಷ್ಮಿಪುರಂನಲ್ಲಿರುವ ಶ್ರೀನಿವಾಸ್ ಪ್ರಸಾದ್ ನಿವಾಸಕ್ಕೆ ಸಿದ್ದರಾಮಯ್ಯನವರು ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ತವರು ಜಿಲ್ಲೆ, ಮೈಸೂರು ಲೋಕಸಭಾ ಕ್ಷೇತ್ರವನ್ನು ಈ ಬಾರಿ ಗೆಲ್ಲಲೇಬೇಕೆಂಬ ಕಾರಣಕ್ಕೆ ಸಿದ್ದರಾಮಯ್ಯ ತಂತ್ರ ರೂಪಿಸುತ್ತಿದ್ದು, ಇದರ ಮುಂದುವರೆದ ಭಾಗವಾಗಿ ಇಂದಿನ ಭೇಟಿ ನಡೆದಿದೆ ಎಂದು ಹೇಳಲಾಗಿದೆ.

ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದ ಶ್ರೀನಿವಾಸ್ ಪ್ರಸಾದ್, ಸಿದ್ದರಾಮಯ್ಯನವರೆೊಂದಿಗೆ ಮುನಿಸಿಕೊಂಡು ಬಿಜೆಪಿ ಸೇರ್ಪಡೆಯಾಗಿದ್ದರು. ಅಲ್ಲದೆ ಅಂತರವನ್ನೂ ಕಾದುಕೊಂಡಿದ್ದರು. ಇದೀಗ ಎಂಟು ವರ್ಷಗಳ ಬಳಿಕ ಇಬ್ಬರೂ ಸಹ ಭೇಟಿಯಾಗಿರುವುದು ಹಲವರ ಹುಬ್ಬೇರುವಂತೆ ಮಾಡಿದೆ. ಚುನಾವಣಾ ರಾಜಕಾರಣದಿಂದ ಹಿಂದೆ ಸರಿದಿರುವ ಶ್ರೀನಿವಾಸ್ ಪ್ರಸಾದ್ ಅವರ ಮುಂದಿನ ನಿಲುವೇನು ಎಂಬುದು ಕೂಡ ಕುತೂಹಲಕರವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read