ಕ್ಯಾಲಿಫೋರ್ನಿಯಾ : 18 ದಿನಗಳ ಬಾಹ್ಯಾಕಾಶ ಯಾನ ಮುಗಿಸಿ ಭಾರತೀಯ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾನಿಗಳು ಭೂಮಿಗೆ ಬಂದಿಳಿದಿದ್ದಾರೆ. ಮಧ್ಯಾಹ್ನ 3 ಗಂಟೆ 2 ನಿಮಿಷಕ್ಕೆ ಕ್ಯಾಲಿಫೋರ್ನಿಯಾದ ಕರಾವಳಿ ಪ್ರದೇಶಕ್ಕೆ ನೌಕೆ ಬಂದಿಳಿದಿದೆ.
ಹೌದು, ಭಾರತೀಯ ಗ್ರೂಪ್ ಕ್ಯಾ. ಶುಭಾಂಶು ಶುಕ್ಲಾ, ಅಮೆರಿಕದ ಪೆಗ್ಗಿ ವಿಟ್ಸನ್, ಪೋಲೆಂಡ್ ನ ಮಿಷನ್ ಸ್ಪೆಷಲಿಸ್ಟ್ ಸ್ಲಾವೋಸ್ಜ್ ಉಜ್ನಾನ್ಸ್ಕಿ, ಹಂಗೇರಿಯಾದ ಗಗನಯಾನಿ ಟಿಬೋರ್ ಕಾಪು ಅವರು ಭೂಮಿ ಮೇಲೆ ಲ್ಯಾಂಡ್ ಆಗಿದ್ದಾರೆ.

