ಪಹಲ್ಗಾಮ್ ಉಗ್ರರ ದಾಳಿ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಪಹಲ್ಗಾಮ್ ಉಗ್ರ ದಾಳಿಗೆ ಭಾರತ ಆಕ್ರೋಶ ವ್ಯಕ್ತಪಡಿಸುತ್ತಿದೆ. ಮೋದಿ ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿದೆ. ದುರಂತದಲ್ಲಿ ಬಲಿಯಾದವರು ಕಾಂಗ್ರೆಸ್ ನಾಯಕರಿಗೆ ಕೇವಲ ಪ್ರವಾಸಿಗರಾಗಿ ಕಾಣುತ್ತಿದ್ದಾರೆಯೇ ಹೊರತು ಹಿಂದೂಗಳಾಗಿ ಕಾಣುತ್ತಿಲ್ಲ. ಹಿಂದೂ ವಿರೋಧಿ ಮನಸ್ಥಿತಿಯ ಕಾಂಗ್ರೆಸ್ಸಿಗರು ಇಂತಹ ವಿಚಾರದಲ್ಲೂ ರಾಜಕೀಯ ಮಾಡುವುದು ಸರಿಯಲ್ಲ ಎಂದಿದ್ದಾರೆ.
ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ಭೀಕರ ದಾಳಿಗೆ ಬಲಿಯಾದ ನತದೃಷ್ಟರ ಪೈಕಿ ಕರ್ನಾಟಕದ ಭರತ್ ಭೂಷಣ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಪಹಲ್ಗಾಮ್ ಉಗ್ರ ದಾಳಿಗೆ ಭಾರತ ಆಕ್ರೋಶ ವ್ಯಕ್ತಪಡಿಸುತ್ತಿದೆ. ಮೋದಿ ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿದೆ.
— BJP Karnataka (@BJP4Karnataka) April 24, 2025
ದುರಂತದಲ್ಲಿ ಬಲಿಯಾದವರು ಕಾಂಗ್ರೆಸ್ ನಾಯಕರಿಗೆ ಕೇವಲ ಪ್ರವಾಸಿಗರಾಗಿ ಕಾಣುತ್ತಿದ್ದಾರೆಯೇ ಹೊರತು ಹಿಂದೂಗಳಾಗಿ ಕಾಣುತ್ತಿಲ್ಲ. ಹಿಂದೂ ವಿರೋಧಿ ಮನಸ್ಥಿತಿಯ ಕಾಂಗ್ರೆಸ್ಸಿಗರು ಇಂತಹ ವಿಚಾರದಲ್ಲೂ ರಾಜಕೀಯ ಮಾಡುವುದು… pic.twitter.com/7oNm7w3Yb5