HomeKarnatakaಕೇಂದ್ರ ಸಚಿವ ವಿ.ಸೋಮಣ್ಣಗೆ ಬಿಗ್ ಶಾಕ್; ಕಚೇರಿ ವಾಪಾಸ್ ಪಡೆದ ಸರ್ಕಾರ

ಕೇಂದ್ರ ಸಚಿವ ವಿ.ಸೋಮಣ್ಣಗೆ ಬಿಗ್ ಶಾಕ್; ಕಚೇರಿ ವಾಪಾಸ್ ಪಡೆದ ಸರ್ಕಾರ

ತುಮಕೂರು: ಕೇಂದ್ರ ರಾಜ್ಯ ಖಾತೆ ಸಚಿವ ವಿ.ಸೋಮಣ್ಣಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ಅವರಿಗೆ ನೀಡಲಾಗಿದ್ದ ಕಚೇರಿಯನ್ನು ವಾಪಸ್ ಪಡೆಯಲಾಗಿದೆ.

ಕೇಂದ್ರ ಸಚಿವ ವಿ.ಸೋಮಣ್ಣ ತುಮಕೂರಿನಲ್ಲಿ ಹಳೇ ಪರಿವೀಕ್ಷಣಾ ಮಂದಿರದಲ್ಲಿ ಕಚೇರಿ ಉಪಯೋಗಕ್ಕೆ ಪಡೆದುಕೊಂಡಿದ್ದರು. ಇನ್ನೇನು ಕಚೇರಿ ಉದ್ಘಾಟನೆಗೆ ಸಿದ್ಧವಾಗಿದೆ ಎನ್ನುವಾಗಲೇ ರಾಜ್ಯ ಸರ್ಕಾರ ಕಚೇರಿಯನ್ನು ಹಿಂಪಡೆದಿದೆ.

ತುಮಕೂರಿನ ರೈಲ್ವೆ ನಿಲ್ದಾಣ ಬಳಿ ಇರುವ ಹಳೇ ಐಬಿಯನ್ನು ಸೋಮಣ್ಣ ಅವರ ಕಚೇರಿ ಉಪಯೋಗಕ್ಕೆ ನೀದಲು ಅನುಮೋದನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ನೂತನ ಕಚೇರಿ ಎಂದು ಪೀಠೋಪಕರಣಗಳನ್ನು ಅಳವಡಿಸಿ, ಅಲ್ಲಿದ್ದ ನಾಲ್ಕು ಕೊಠಡಿಗಳನ್ನು ಉನ್ನತೀಕರಣಗೊಳಿಸಲಾಗಿತ್ತು. ಆಗಸ್ಟ್ 18ರಂದು ಕಚೇರಿ ಉದ್ಘಾಟನೆಗೆ ಮುಹೂರ್ತ ನಿಗದಿಯಾಗಿತ್ತು. ಕಚೇರಿ ಉದ್ಘಾಟನೆಗೆ ಎರಡು ದಿನ ಬಾಕಿ ಇರುವಾಗಲೇ ರಾಜ್ಯ ಸರ್ಕಾರ ಕಚೇರಿ ವಾಪಾಸ್ ಪಡೆದುಕೊಳ್ಲುವಂತೆ ಜಿಲ್ಲಾಧಿಕಾರಿಗೆ ಆದೇಶ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular