HomeKarnatakaBIG NEWS: ರಾಜ್ಯ ಬಿಜೆಪಿಯಲ್ಲಿ ಮತ್ತೆ ಭುಗಿಲೆದ್ದ ಅಸಮಾಧಾನ; ಬಿ.ವೈ.ವಿಜಯೇಂದ್ರ ಆಪ್ತನ ವಿರುದ್ಧವೇ ವಿ.ಸೋಮಣ್ಣ ಕಿಡಿ

BIG NEWS: ರಾಜ್ಯ ಬಿಜೆಪಿಯಲ್ಲಿ ಮತ್ತೆ ಭುಗಿಲೆದ್ದ ಅಸಮಾಧಾನ; ಬಿ.ವೈ.ವಿಜಯೇಂದ್ರ ಆಪ್ತನ ವಿರುದ್ಧವೇ ವಿ.ಸೋಮಣ್ಣ ಕಿಡಿ

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತಿರುವ ಹೊತ್ತಲ್ಲೇ ರಾಜ್ಯ ಬಿಜೆಪಿಯಲ್ಲಿ ಮತ್ತೆ ಅಸಮಾಧಾನ ಭುಗಿಲೆದ್ದಿದೆ. ಮಾಜಿ ಸಚಿವ.ವಿಸೋಮಣ್ಣ ಪಕ್ಷದ ನಾಯಕರ ವಿರುದ್ಧವೇ ಬೇಸರ ಹೊರವಾಕಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ವಿ.ಸೋಮಣ್ಣ, ವಿಧಾನಸಭಾ ಚುನಾವಣೆಯಲ್ಲಿ ನನ್ನ ಸೋಲಿಗೆ ಕಾರಣ ಯಾರು ಎಂಬುದು ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಗೊತ್ತಿದೆ. ಅವರ ವಿರುದ್ಧ ವಿಜಯೇಂದ್ರ ಕ್ರಮ ಕೈಗೊಳ್ಳಬೇಕು ಎಂದು ಖಡಕ್ ಆಗಿ ಹೇಳಿದ್ದಾರೆ.

ಈ ಮೂಲಕ ವಿಜಯೇಂದ್ರ ಆಪ್ತ ರುದ್ರೇಶ್ ವಿರುದ್ಧ ಅಸಮಾಧಾನ ಹೊರ ಹಾಕಿರುವ ವಿ.ಸೋಮಣ್ಣ, ನನ್ನ ಸೋಲಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಸಿಡಿದೇಳುವುದು ಪಕ್ಕಾ. ಮನೆಹಾಳರು ನಮ್ಮ ಜೊತೆ ಇರಬಾರದು ಎಂದು ಎಚ್ಚರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೋಮಣ್ಣ ಅಸಮಾಧಾನದ ಬೆನ್ನಲ್ಲೇ ವಿಪಕ್ಷ ನಾಯಕ ಆರ್.ಅಶೋಕ್, ಸಿ.ಟಿ.ರವಿ ಸೇರಿದಂತೆ ಹಲವು ನಾಯಕರು ಸೋಮಣ್ಣ ಸಮಾಧಾನಕ್ಕೆ ಯತ್ನಿಸಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular