HomeKarnatakaವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ಹೊತ್ತಲ್ಲೇ ಸಚಿವ ಗೈರು: ಸಿಎಂ, ರಾಷ್ಟ್ರೀಯ ಅಧ್ಯಕ್ಷರೇ ಬಂದ್ರೂ ಗೈರುಹಾಜರಾಗಿ...

ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ಹೊತ್ತಲ್ಲೇ ಸಚಿವ ಗೈರು: ಸಿಎಂ, ರಾಷ್ಟ್ರೀಯ ಅಧ್ಯಕ್ಷರೇ ಬಂದ್ರೂ ಗೈರುಹಾಜರಾಗಿ ಅಸಮಾಧಾನ ಹೊರ ಹಾಕಿದ ಸೋಮಣ್ಣ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಕೈಗೊಂಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಮಲೆಮಹದೇಶ್ವರ ಬೆಟ್ಟದಲ್ಲಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಆದರೆ, ಯಾತ್ರೆಯ ಮೊದಲ ತಂಡದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಕಾರ್ಯಕ್ರಮದಿಂದ ದೂರ ಉಳಿದು ಅಸಮಾಧಾನ ಹೊರಹಾಕಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಕ್ಷದ ರಾಷ್ಟ್ರೀಯ ಅಧ್ಯಕ್ಷರೇ ಬಂದರೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಭಾಗವಹಿಸಿಲ್ಲ. ವಿಜಯ ಸಂಕಲ್ಪ ಯಾತ್ರೆಯ ತಂಡದಲ್ಲಿಯೂ ಸೋಮಣ್ಣ ಅವರಿದ್ದಾರೆ. ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರೂ ರಥಯಾತ್ರೆ ತಂಡದ ನೇತೃತ್ವವನ್ನು ತಮಗೆ ನೀಡಿಲ್ಲ. ಚುನಾವಣೆಯಲ್ಲಿ ಸ್ಪರ್ಧೆ ಮತ್ತು ಕ್ಷೇತ್ರದ ಆಯ್ಕೆ ವಿಚಾರದಲ್ಲಿ ತಮ್ಮ ಬೇಡಿಕೆಗೆ ಪಕ್ಷದ ನಾಯಕರು ಸ್ಪಂದಿಸಿಲ್ಲ. ಚಾಮರಾಜನಗರ ಜಿಲ್ಲೆಗೆ ಅನೇಕ ಯೋಜನೆ, ಕಾರ್ಯಕ್ರಮಗಳ ಅನುಷ್ಠಾನಕ್ಕೆ ಮನವಿ ಮಾಡಿದ್ದರೂ ಬಜೆಟ್ ನಲ್ಲಿ ಸ್ಪಂದನೆ ದೊರೆತಿಲ್ಲ. ತಮ್ಮ ಪುತ್ರನಿಗೆ ಟಿಕೆಟ್ ಕೊಡುವಂತೆ ಬೇಡಿಕೆ ಇಟ್ಟರೂ ನಾಯಕರು ಒಪ್ಪಿಲ್ಲ. ಈ ಹಿನ್ನೆಲೆಯಲ್ಲಿ ಸೋಮಣ್ಣ ಅಸಮಾಧಾನಗೊಂಡಿದ್ದು, ವಿಜಯ ಸಂಕಲ್ಪ ಯಾತ್ರೆಯಿಂದ ದೂರ ಉಳಿದಿದ್ದಾರೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular