ಹೈವೋಲ್ಟೇಜ್ ವರುಣಾ ಕ್ಷೇತ್ರದಲ್ಲಿ ಸಚಿವ ಸೋಮಣ್ಣ ಪ್ರಚಾರಕ್ಕೆ ಆಡ್ಡಿ: ಬಿಜೆಪಿಯಿಂದ ದೂರು ದಾಖಲು

ಮೈಸೂರು: ಹೈವೋಲ್ಟೇಜ್ ವರುಣಾ ಕ್ಷೇತ್ರದಲ್ಲಿ ಸಚಿವ ವಿ. ಸೋಮಣ್ಣ ಅವರ ಪ್ರಚಾರಕ್ಕೆ ಅಡ್ಡಿಪಡಿಸಿದ್ದು, ಬಿಜೆಪಿಯಿಂದ ದೂರು ದಾಖಲಿಸಲಾಗಿದೆ.

ಸೋಮಣ್ಣನವರ ಪ್ರಚಾರಕ್ಕೆ ಎರಡನೇ ಬಾರಿ ಅಡ್ಡಿಪಡಿಸಲಾಗಿದೆ. ಭುಗತಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸೋಮಣ್ಣ ಪ್ರಚಾರ ಆರಂಭಿಸಿದ ವೇಳೆ ಕೆಲವು ಯುವಕರು ಭಾಷಣಕ್ಕೆ ಅಡ್ಡಿಪಡಿಸಿದ್ದಾರೆ. ಮತ್ತೆ ಕೆಲವರು ಸೋಮಣ್ಣ ಮತ್ತು ಬಿಜೆಪಿ ಪರವಾಗಿ ಘೋಷಣೆ ಕೂಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ. ಪೊಲೀಸರು ತಕ್ಷಣವೇ ಕ್ರಮ ಕೈಗೊಂಡು ಎರಡೂ ಗುಂಪಿನವರನ್ನು ಸಮಾಧಾನಪಡಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಸಿದ್ದರಾಮಯ್ಯ ಬೆಂಬಲಿಗರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಸೋಮಣ್ಣ ಪ್ರಚಾರಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾನೂನು ಪ್ರಕೋಷ್ಟ ಜಿಲ್ಲಾ ಸಂಚಾಲಕ ಸಿ.ಕೆ. ರುದ್ರಮೂರ್ತಿ ದೂರು ನೀಡಿದ್ದಾರೆ. ಪ್ರಚಾರದ ವೇಳೆ ಉದ್ದೇಶಪೂರ್ವಕವಾಗಿ ತಡೆದು ಅಸಭ್ಯವಾಗಿ ವರ್ತಿಸಿದ್ದು, ಪ್ರಚಾರ ನಡೆಸಬಾರದು ಎಂದು ಬೆದರಿಕೆ ಹಾಕಿದ್ದಾರೆ. ಚುನಾವಣಾ ಪ್ರಚಾರಕ್ಕೆ ತೊಂದರೆ ನೀಡಿದ ವ್ಯಕ್ತಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ದೂರು ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read