ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಸಿಹಿ ಸುದ್ದಿ: ಪಿಎಂ ವಸತಿ ಯೋಜನೆ ಆರ್ಥಿಕ ನೆರವು ಹೆಚ್ಚಳ, ಬ್ಯಾಂಕ್ ಸಾಲದ ಬಡ್ಡಿ ಇಳಿಕೆಗೆ ಕ್ರಮ

ಬೆಂಗಳೂರು: ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಆರ್ಥಿಕ ನೆರವು ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

ವಿಧಾನ ಪರಿಷತ್ ನಲ್ಲಿ ಮಾತನಾಡಿದ ಸಚಿವರು, ಪ್ರಧಾನ ಮಂತ್ರಿ ಆವಾಸ್ ಯೋಜನೆ ನೆರವು ಹೆಚ್ಚಳ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ 1.50 ಲಕ್ಷ ರೂ. ಸಹಾಯಧನ ನೀಡುತ್ತಿದ್ದು, ಇಷ್ಟು ಮೊತ್ತಕ್ಕೆ ನಗರಗಳಲ್ಲಿ ಮನೆ ನಿರ್ಮಿಸುವುದು ಕಷ್ಟ ಸಾಧ್ಯ. ರಾಜ್ಯದ ವಿವಿಧ ವಸತಿ ಯೋಜನೆಗಳಲ್ಲಿ ಸಮನ್ವಯಗೊಳಿಸಿ ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ. ಪ್ರಸ್ತುತ ಮೂರು ಚದರ ಅಡಿ ಮನೆ ನಿರ್ಮಾಣಕ್ಕೆ ಆರ್ಥಿಕ ನೆರವು ನೀಡುವ ಬಗ್ಗೆ ನಿಬಂಧನೆಗಳಿದ್ದು, ಅವುಗಳನ್ನು ಸರಳೀಕರಣ ಮಾಡಲಾಗಿದೆ. ಮನೆ ನಿರ್ಮಿಸಲು ಬ್ಯಾಂಕ್ ಸಾಲದ ಬಡ್ಡಿ ಪ್ರಮಾಣ ಇಳಿಕೆ ಮಾಡುವ ಬಗ್ಗೆಯೂ ಚರ್ಚೆ ನಡೆದಿದೆ ಎಂದು ಸಚಿವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read