ದಾವಣಗೆರೆ: ಮಾಜಿ ಸಚಿವ ಜನಾರ್ಧನ ರೆಡ್ಡಿ ಹಾಗೂ ಶ್ರೀರಾಮುಲು ಮುನಿಸು ಮರೆತು ಮತ್ತೆ ಒಂದಾಗಿದ್ದು, ಅವರು ಒಂದಾಗಲಿ ಎಂದು ಅಡಿಪಾಯ ಹಾಕಿದ್ದೇ ನಾನು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿ.ಸೋಮಣ್ಣ, ರೆಡ್ಡಿ-ಶ್ರೀರಾಮುಲು ಇಬ್ಬರೂ ಮುನಿಸು ಮರೆತು ಒಂದಾಗಿದ್ದಾರೆ. ಈ ಮೂಲಕ ನನಗೆ ಒಳ್ಳೆಯ ಗಿಫ್ಟ್ ಕೊಟ್ಟಿದ್ದಾರೆ ಎಂದರು.
ಇನ್ನು ನಮ್ಮಲ್ಲಿ ಯಾವುದೇ ಟಿಂ ಇಲ್ಲ. ನಾವೆಲ್ಲರೂ ಒಂದೆ ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತೇವೆ. ರಾಜ್ಯಾಧ್ಯಕ್ಷರ ಬದಲಾವಣೆ ಎಂಬುದು ಹರಿಹರ ಶಾಸಕ ಬಿ.ಪಿ.ಹರೀಶ್ ಅಭಿಪ್ರಾಯ. ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ. ಯತ್ನಾಳ್ ಪಕ್ಷಕ್ಕೆ ಹಿಂದಿರುಗುವ ವಿಚಾರ ಕೂಡ ನನಗೆ ಗೊತ್ತಿಲ್ಲ ಎಂದು ಹೇಳಿದರು.