HomeKarnatakaBIG NEWS: ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ; ವಿ.ಸೋಮಣ್ಣ ಹೇಳಿದ್ದೇನು?

BIG NEWS: ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ; ವಿ.ಸೋಮಣ್ಣ ಹೇಳಿದ್ದೇನು?

ನವದೆಹಲಿ: ಬಿಜೆಪಿ ಮಾಜಿ ಸಚಿವ ವಿ.ಸೋಮಣ್ಣ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂಬ ಮಾತು ಕೇಳಿಬರುತ್ತಿದ್ದು, ಈ ಬಗ್ಗೆ ಇದೀಗ ಸ್ವತಃ ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿ.ಸೋಮಣ್ಣ, ತುಮಕೂರಿನಲ್ಲಿ ನಾನು ಸ್ಪರ್ಧೆ ಮಾಡಬೇಕೇ ಬೇಡವೇ ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ತುಮಕೂರು ಹಾಲಿ ಸಂಸದ ಜಿ.ಎಸ್.ಬಸವರಾಜ್ ನನಗೆ ಆತ್ಮೀಯರು. ತುಮಕೂರು ಕ್ಷೇತ್ರಕ್ಕೆ ನಾನು ಬರಬೇಕು ಎಂಬುದು ಅವರ ಭಾವನೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಖಾಸಗಿ ಕೆಲಸಕ್ಕಾಗಿ ನಾನು ದೆಹಲಿಗೆ ಬಂದಿದ್ದೇನೆ. ಸಾಧ್ಯವಾದರೆ ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗುತ್ತೇನೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನೂ ಭೇಟಿ ಮಾಡಲು ಯತ್ನಿಸುತ್ತೇನೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular