ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಂದೊಂದು ತಿಕ್ಕಲು ಹಿಡಿಯುತ್ತಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ವಾಗ್ದಾಳಿ ನಡೆಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ವಿ.ಸೋಮಣ್ಣ, ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಸಿಎಂ ಸಿದ್ದರಾಮಯ್ಯ ತೆಗೆದುಕೊಂಡಿರುವ ಸ್ವಂತ ನಿರ್ಧಾರವಲ್ಲ. ಯಾರದೋ ಒತ್ತಡ, ಯಾರನ್ನೋ ಮೆಚ್ಚಿಸಲು ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ್ದಾರೆ ಎಂದರು.
ದಸರಾ ಉದ್ಘಾಟನೆಯ ಶಿಷ್ಟಾಚಾರ ಉಲ್ಲಂಘನೆ ಮಾಡಿದರೆ ರಾಜ್ಯಕ್ಕೆ ಅಪಾಯ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತೊಂದರೆ ಆಗುತ್ತಿದೆ. ಸಾವಿರಾರು ವರ್ಷಗಳಿಂದ ಒಂದು ಸಂಪ್ರದಾಯ, ಶಿಷ್ಟಾಚಾರ ನಡೆದುಕೊಂಡು ಬಂದಿದೆ. ತಾಯಿ ಚಾಮುಂಡಿ ಮನಸ್ಸು ಗೆಲ್ಲುವ ಪ್ರಯತ್ನ ಮಾಡಿ ಎಂದು ಹೇಳಿದರು.
ಬಾನು ಮುಷ್ತಾಕ್ ಸಿಕ್ಕರೆ ದಸರಾ ಉದ್ಘಾಟನೆಯಿಂದ ಹಿಂದೆ ಸರಿಯುವಂತೆ ಮನವಿ ಮಾಡುತ್ತೇನೆ. ಚಾಮುಂಡಿ ಕೋಪಗೊಂಡ್ರೆ ನಮಗೂ, ನಿಮಗೂ, ರಾಜ್ಯಕ್ಕೂ ಗಂಡಾಂತರ. ದೇವರು ಇಲ್ಲದಿದ್ದರೆ ಮೋದಿ ಇಷ್ಟೊಂದು ಸಾಧನೆ ಮಾಡಲು ಆಗುತ್ತಿರಲಿಲ್ಲ ಎಂದು ಹೇಳಿದರು.