HomeBusinessರಾಜ್ಯದ ಜನತೆಗೆ ಗುಡ್ ನ್ಯೂಸ್: ವಿದ್ಯುತ್ ದರ ಏರಿಕೆ ಇಲ್ಲ

ರಾಜ್ಯದ ಜನತೆಗೆ ಗುಡ್ ನ್ಯೂಸ್: ವಿದ್ಯುತ್ ದರ ಏರಿಕೆ ಇಲ್ಲ

ಬೆಂಗಳೂರು: ವಿದ್ಯುತ್ ದರ ಏರಿಕೆ ಇಲ್ಲವೆಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ವಿದ್ಯುತ್ ದರ ಏರಿಕೆ ಮಾಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ವಿಧಾನ ಪರಿಷತ್ ನಲ್ಲಿ ಸಚಿವರು ಮಾಹಿತಿ ನೀಡಿದ್ದಾರೆ.

ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ನ ಸಿ.ಎನ್. ಮಂಜೇಗೌಡ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ವಿದ್ಯುತ್ ಸರಬರಾಜು ಕಂಪನಿಗಳು ನಿಯಮಾನಸಾರ ಕೆಇಆರ್‌ಸಿಗೆ ವಿದ್ಯುತ್ ದರ ಏರಿಕೆ ಬಗ್ಗೆ ಪ್ರಸ್ತಾವನೆ ಸಲ್ಲಿಸಿರಬಹುದು. ಕೆಇಆರ್‌ಸಿ ಗ್ರಾಹಕರ ಅದಾಲತ್ ನಡೆಸಲಿದ್ದು, ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾಜಿ ಸೈನಿಕರ ನೀರಾವರಿ ಪಂಪ್ ಸೆಟ್ ಗಳಿಗೆ ಸಹಾಯಧನ ನೀಡುವ ಬೇಡಿಕೆ ಪರಿಗಣಿಸಲಾಗುವುದು. 7 ಗಂಟೆಗಳ ಕಾಲ 3 ಫೇಸ್ ವಿದ್ಯುತ್ ಹಂಚಿಕೆಯಲ್ಲಿ ತಾಂತ್ರಿಕ ವ್ಯತ್ಯಾಸಗಳಿದ್ದರೆ ಅದನ್ನು ಸರಿಪಡಿಸಲಾಗುವುದು. ಪರಿಸರ ಸ್ನೇಹಿ ಹಸಿರು ವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಪ್ರಧಾನ ಮಂತ್ರಿ ಕುಸುಮ್ -ಬಿ ಯೋಜನೆಯಡಿ ವೈಯಕ್ತಿಕ ಕೃಷಿ ಪಂಪ್ಸೆಟ್ ಗಳಿಗೆ ಜಾಲ ಮುಕ್ತ ಸೌರ ವಿದ್ಯುತ್ ಪೂರೈಕೆ ಮಾಡಲಾಗುವುದು. ಫಲಾನುಭವಿಗಳ ಪೈಕಿ ಪರಿಶಿಷ್ಟ ಜಾತಿ, ಪಂಗಡದವರಿಗೆ ಶೇಕಡ 50ರಷ್ಟು, ಇತರೆ ವರ್ಗದವರಿಗೆ ಶೇಕಡ 30ರಷ್ಟು ಸಬ್ಸಿಡಿ ನೀಡಲಾಗುವುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular