ದಾವಣಗೆರೆ: ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಶ್ರೀ ವಿರುದ್ಧ ಮಕ್ಕಳ ಕಲ್ಯಾಣ ಮಂಡಳಿಗೆ ದೂರು ನೀಡಿರುವ ಘಟನೆ ನಡೆದಿದೆ.
ವಚನಾನಂದ ಶ್ರೀಗಳನ್ನು ಹರಿಹರ ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆಗೊಳಿಸಿದ ಬಳಿಕ ಪಂಚಮಸಾಲಿ ಟ್ರಸ್ಟ್ ಸದಸ್ಯರು ವಚನನಂದ ಶ್ರೀ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಸ್ವಾಮೀಜಿ ಪ್ರತಿದಿನ ವಸತಿ ಶಾಲೆಯ ಮಕ್ಕಳಿಂದ ಮಸಾಜ್ ಮಾಡಿಸಿಕೊಳ್ಳುತ್ತಾರೆ. ಹಿಂಸಿಸುತ್ತಾರೆ. ಹೀಗಾಗಿ ಹಲವು ಮಕ್ಕಳು ವಸತಿ ಶಾಲೆಯನ್ನೇ ತೊರೆದು ಹೋಗಿದ್ದಾರೆ ಎಂದು ಆರೋಪಿಸಿದ್ದರು.
ಅಲ್ಲದೇ ಮಕ್ಕಳ ಪೋಷಕರು ದೂರು ನೀಡಲು ಮುಂದಾಗಿದ್ದರು. ನಾವು ತಡೆದಿದ್ದಾಗಿ ಹೇಳಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಪಂಚಮಸಾಲಿ ಟ್ರಸ್ಟ್ ಸದಸ್ಯರು ವಚನಾನಂದ ಶ್ರೀ ವಿರುದ್ಧ ಮಕ್ಕಳ ಕಲ್ಯಾಣ ಮಂಡಳಿಗೆ ದೂರು ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು ಇಂದು ದಾವಣಗೆರೆಯ ಹರಿಹರ ಪಂಚಮಸಾಲಿ ಪೀಠಕ್ಕೆ ಆಗಮಿಸಿ ಶ್ರೀಗಳನ್ನು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ .

