HomeKarnatakaಪೋಕ್ಸೋ ಕೇಸ್: ಜಾಮೀನು ರದ್ದುಗೊಳಿಸುವಂತೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ತನಿಖಾಧಿಕಾರಿ: ವಚನಾನಂದ ಶ್ರೀಗಳಿಗೆ ಮತ್ತಷ್ಟು...

ಪೋಕ್ಸೋ ಕೇಸ್: ಜಾಮೀನು ರದ್ದುಗೊಳಿಸುವಂತೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ತನಿಖಾಧಿಕಾರಿ: ವಚನಾನಂದ ಶ್ರೀಗಳಿಗೆ ಮತ್ತಷ್ಟು ಹೆಚ್ಚಾಯ್ತು ಬಂಧನ ಭೀತಿ

ದಾವಣಗೆರೆ: ಪೋಕ್ಸೋ ಪ್ರಕರಣದಲ್ಲಿ ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಪಡೆದಿದ್ದ ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ಕೋರಿ ತನಿಖಾಧಿಕಾರಿ ಜಿಲ್ಲಾಅ ಸೆಷನ್ಸ್ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಈ ಹಿನ್ನೆಲ್ರೆಯಲ್ಲಿ ವಚನಾನಂದ ಸ್ವಾಮೀಜಿ ಅವರಿಗೆ ಬಂಧನ ಭೀತಿ ಮತ್ತಷ್ಟು ಹೆಚ್ಚಾಗಿದೆ.

ಬಾಲಕನ ಮೇಲೆ ಹಲ್ಲೆ, ಲೈಂಗಿಕ ದೌರ್ಜನ್ಯ ಆರೋಪ ವಿಚಾರವಾಗಿ ಕಳೆದ ವಾರವಷ್ಟೇ ವಚನಾನಂದ ಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಗಂಭೀರ ಪ್ರಕರಣ ದಾಖಲಾಗಿತ್ತು. ಆದರೆ, ಕೇಸ್ ದಾಖಲಾಗುವ ಮುನ್ನವೇ ಸ್ವಾಮೀಜಿ ನಿರೀಕ್ಷಣಾ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಪ್ರಕರಣದ ತನಿಖಾಧಿಕಾರಿ ಸುರೇಶ್ ಸಗರಿ ಅವರು ಶ್ರೀಗಳ ಜಾಮೀನನ್ನು ರದ್ದು ಮಾಡುವಂತೆ ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹರಿಹರ ಪೊಲೀಸರು ಮಕ್ಕಳ ಮೇಲೆ ಸ್ವಾಮೀಜಿ ನಡೆಸಿದ್ದಾರೆ ಎನ್ನಲಾದ ದೌರ್ಜನ್ಯ ಮತ್ತು ಹಲ್ಲೆ ಕುರಿತು ಸಂಪೂರ್ಣ ಮಾಹಿತಿಯನ್ನೊಳಗೊಂಡ ಪ್ರಮುಖ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಬಾಗಲಕೋಟೆ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ. ಪೊಲೀಸರು ಸಲ್ಲಿಸಿರುವ ಈ ಜಾಮೀನು ರದ್ದತಿ ಅರ್ಜಿಯ ವಿಚಾರಣೆಯನ್ನು ದಾವಣಗೆರೆಯ ವಿಶೇಷ ಪೋಕ್ಸೊ ನ್ಯಾಯಾಲಯವು ಇದೇ ಮೇ 29 ರಂದು ಕೈಗೆತ್ತಿಕೊಳ್ಳಲಿದೆ.

ಒಂದು ವೇಳೆ ಕೋರ್ಟ್ ಪೊಲೀಸರ ವಾದವನ್ನು ಪುರಸ್ಕರಿಸಿ ಜಾಮೀನು ರದ್ದುಗೊಳಿಸಿದರೆ, ವಚನಾನಂದ ಸ್ವಾಮೀಜಿ ಬಂಧನವಾಗುವ ಸಾಧ್ಯತೆ ದಟ್ಟವಾಗಿದೆ.

ವಚನಾನಂದ ಸ್ವಾಮೀಜಿ ವಿರುದ್ಧ 16 ವರ್ಷದ ಬಾಲಕನಿಂದ ಮಸಾಜ್ ಮಾಡಿಸಿಕೊಂಡ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ಬಲವಂತವಾಗಿ ಬಾಲಕನಿಂದ ಮಸಾಜ್ ಮಾಡಿಸಿಕೊಂಡು ಕಿರುಕುಳ ನೀಡಿ ಹಲ್ಲೆ ನಡೆಸಿದ್ದಾಗಿ ಬಾಲಕನ ತಾಯಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಸ್ವಾಮೀಜಿಗಳ ವಿರುದ್ಧ ಹರಿಹರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಸ್ವಾಮೀಜಿಯವರನ್ನು ಪೀಠದಿಂದ ಪದಚ್ಯುತಗೊಳಿಸಿದ ಬೆನ್ನಲ್ಲೇ ಈ ದೂರು ದಾಖಲಾಗಿತ್ತು. ಸಂತ್ರಸ್ತ ಬಾಲಕನ ತಾಯಿ ಮೇ 7ರಂದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಘಟನಾ ಸ್ಥಳ ಹರಿಹರ ವ್ಯಾಪ್ತಿಗೆ ಬರುವುದರಿಂದ ಪ್ರಕರಣವನ್ನು ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾಯಿಸಿ, ಎಫ್‌ಐಆರ್ ದಾಖಲಿಸಲಾಗಿತ್ತು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular