8 ಸಾಧಕರಿಗೆ ವಾಲ್ಮೀಕಿ ಪ್ರಶಸ್ತಿ: 5 ಲಕ್ಷ ರೂ. ನಗದು, 20 ಗ್ರಾಂ ಚಿನ್ನದ ಪದಕದೊಂದಿಗೆ ಇಂದು ಸಿಎಂ ಸಿದ್ದರಾಮಯ್ಯರಿಂದ ಪ್ರದಾನ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿ ಉತ್ಸವ ಅಂಗವಾಗಿ ವಿಧಾನಸೌಧದ ಬ್ಯಾಂಕ್ ಹಾಲ್ ನಲ್ಲಿ ಇಂದು ನಡೆಯಲಿರುವ ಸಮಾರಂಭದಲ್ಲಿ 8 ಸಾಧಕರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ನಿವೃತ್ತ ಮುಖ್ಯ ನ್ಯಾಯಮೂರ್ತಿ ಎನ್.ವೈ. ಹನುಮಂತಪ್ಪ, ಮಹದೇವಮ್ಮ ರಂಗಸ್ವಾಮಿ, ರಾಮಣ್ಣ ಮಹದೇವ ಗಸ್ತಿ, ಜಿ.ಒ. ಮಹಾಂತಪ್ಪ, ಸೋಮಣ್ಣ, ಶಾರದಾ ಪ್ರಭು ಹುಲಿ ನಾಯಕ, ಸುಕನ್ಯಾ ಮಾರುತಿ, ಸುಜಾತಮ್ಮ ಅವರನ್ನು ಪ್ರಸಕ್ತ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪ್ರಶಸ್ತಿ ಪುರಸ್ಕೃತರಿಗೆ 5 ಲಕ್ಷ ರೂ. ನಗದು, 20 ಗ್ರಾಂ ಚಿನ್ನದ ಪದಕದೊಂದಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು. ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಬಿ. ನಾಗೇಂದ್ರ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ನಿವೃತ್ತ ಐಎಎಸ್ ಅಧಿಕಾರಿ ಬಿ. ಶಿವಪ್ಪ ಅಧ್ಯಕ್ಷತೆಯ ಸಮಿತಿ ವಾಲ್ಮೀಕಿ ಪ್ರಶಸ್ತಿಗೆ ಪುರಸ್ಕೃತರನ್ನು ಆಯ್ಕೆ ಮಾಡಿದೆ. ವಿವಿಧ ಕ್ಷೇತ್ರಗಳಿಂದ ಸಲ್ಲಿಕೆಯಾಗಿದ್ದ 113 ಅರ್ಜಿಗಳನ್ನು ಪರಿಶೀಲಿಸಿ 8 ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 60 ವರ್ಷ ಮೀರಿದ ಹಿರಿಯರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read