HomeKarnatakaBIG NEWS: ಬಳ್ಳಾರಿ ಚುನಾವಣೆಗೆ ವಾಲ್ಮೀಕಿ ನಿಗಮದ 20 ಕೋಟಿ ರೂ. ಬಳಕೆ: ಮಾಜಿ ಸಚಿವ...

BIG NEWS: ಬಳ್ಳಾರಿ ಚುನಾವಣೆಗೆ ವಾಲ್ಮೀಕಿ ನಿಗಮದ 20 ಕೋಟಿ ರೂ. ಬಳಕೆ: ಮಾಜಿ ಸಚಿವ ನಾಗೇಂದ್ರ ಆರೋಪಿ ನಂ. 1

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಮುಖ ರೂವಾರಿ ಮಾಜಿ ಸಚಿವ ಬಿ. ನಾಗೇಂದ್ರ ಎಂದು ಜಾರಿ ನಿರ್ದೇಶನಾಲಯ ಹೇಳಿದೆ.

ಹಗರಣದ ಕುರಿತಾಗಿ ತನಿಖೆ ನಡೆಸಿದ ಇಡಿಯಿಂದ 4970 ಪುಟಗಳ ಆರೋಪ ಪಟ್ಟಿ ಸಲ್ಲಿಸಲಾಗಿದೆ. ನಾಗೇಂದ್ರ ಅವರ ಆಣತಿಯಂತೆ ವಾಲ್ಮೀಕಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿದೆ. ನಿಗಮದಿಂದ 20.19 ಕೋಟಿ ರೂ. ಪಡೆದು ಬಳ್ಳಾರಿ ಲೋಕಸಭಾ ಚುನಾವಣೆಗೆ ಬಳಸಲಾಗಿದೆ. ಹಣ ಅಕ್ರಮವಾಗಿ ವರ್ಗಾವಣೆ ಮಾಡಿ ಬಳ್ಳಾರಿ ಲೋಕಸಭಾ ಕ್ಷೇತ್ರದ ವಿವಿಧ ಬೂತ್ ಗಳಲ್ಲಿ ಹಂಚಲಾಗಿದೆ.

ತಮ್ಮ ಆಪ್ತರ ಮೂಲಕ ಮಾಜಿ ಸಚಿವ ನಾಗೇಂದ್ರ ಹಣ ವರ್ಗಾವಣೆ ಮಾಡಿಸಿದ್ದಾರೆ ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ಜೊತೆಗೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನ ದುರ್ಬಳಕೆ, ಸಾಕ್ಷ್ಯನಾಶ, ಅಪರಾಧಿಕ ಒಳ ಸಂಚಿಗೆ ನಾಗೇಂದ್ರ ಪ್ರಮುಖ ಕಾರಣ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular