ಕಾಂಗ್ರೆಸ್ ಸರ್ಕಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸುವ ನೈತಿಕತೆ ಕಳೆದುಕೊಂಡಿದೆ: ಬಿಜೆಪಿ ವಾಗ್ದಾಳಿ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗಪಡಿಸಿಕೊಂಡು ನಾಡಿನ ಎಸ್.ಟಿ ಸಮುದಾಯಕ್ಕೆ ದ್ರೋಹ ಎಸಗಿದ ಕಾಂಗ್ರೆಸ್ ಸರ್ಕಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸುವ ನೈತಿಕತೆ ಕಳೆದುಕೊಂಡಿದೆ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ.

ವಾಲ್ಮೀಕಿ ನಿಗಮದ ಅಕ್ರಮಗಳನ್ನೆಲ್ಲಾ ಜನರಿಂದ ಮರೆಮಾಚಲು ಕಾಂಗ್ರೆಸ್ ಸರ್ಕಾರ, ಇಂದು ಪತ್ರಿಕೆಗಳಿಗೆ ಜಾಹೀರಾತು ನೀಡಿದೆ. ವಾಸ್ತವದಲ್ಲಿ ಆ ಜಾಹೀರಾತಿನಲ್ಲಿ ವಾಲ್ಮೀಕಿ ನಿಗಮದಲ್ಲಿ ನಡೆಸಿದ ಅಕ್ರಮಗಳನ್ನು ಪ್ರಕಟಿಸುವ ಮೂಲಕ ವಾಲ್ಮೀಕಿ ಮಹರ್ಷಿಗಳ ಮುಂದೆ ಮಂಡಿಯೂರಬೇಕಾಗಿತ್ತು.

ಕಾಂಗ್ರೆಸ್‌ ಸರ್ಕಾರ ಪ್ರಕಟಿಸಬೇಕಾಗಿದ್ದ ಅಸಲಿ ಜಾಹೀರಾತಿನ ಪೋಸ್ಟರ್‌ ಅನ್ನು ಇಂದು ಬಿಜೆಪಿ ಬಿಡುಗಡೆ ಮಾಡಿತು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read