BREAKING NEWS: ವಿಧಾನಸೌಧಕ್ಕೆ ಮುತ್ತಿಗೆ ಯತ್ನ: ಬಿ.ವೈ.ವಿಜಯೇಂದ್ರ, ಆರ್.ಅಶೋಕ್ ಸೇರಿ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಹಗರಣ, ಮೂಡಾ ಅಕ್ರಮ ಪ್ರಕರಣಗಳನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರ ಗೊಳಿಸಿರುವ ಬಿಜೆಪಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಪಕ್ಷ ನಯಾಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಶಾಸಕರು, ಮಾಜಿ ಸಚಿವರು, ಕಾರ್ಯಕರ್ತರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದರು. ಬಳಿಕ ಫ್ರೀಡಂ ಪಾರ್ಕ್ ನಿಂದ ವಿಧಾನಸೌಧದವರೆಗೆ ರ್ಯಾಲಿಯಲ್ಲಿ ತೆರಳಿ, ವಿಧಾನಸೌಧ ಮುತ್ತಿಗೆ ಹಾಕಲು ಯತ್ನಿಸಿದರು. ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ವಿಧಾನಸೌಧದ ಬಳಿ ಪೊಲೀಸರು ಅಳವಡಿಸಿದ್ದ ಬ್ಯಾರಿಕೇಡ್ ಗಳನ್ನು ಹತ್ತಿ ಮುನ್ನುಗ್ಗಲು ಬಿಜೆಪಿ ನಾಯಕರು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಬಿಜೆಪಿ ನಾಯಕರನ್ನು ತಡೆಯಲು ಹರಸಾಹಸಪಟ್ಟಿದ್ದು, ಬಿ.ವೈ.ವಿಜಯೇಂದ್ರ, ಆರ್.ಅಶೋಕ್ ಸೇರಿದಂತೆ ಹಲವು ನಾಯಕರನ್ನು ವಶಕ್ಕೆ ಪಡೆದು ವಾಹನಗಳಲ್ಲಿ ತುಂಬಿ ಕರೆದೊಯ್ದರು.

ಈ ವೇಳೆ ಮಾತನಾಡಿದ ಬಿ.ವೈ.ವಿಜಯೇಂದ್ರ, ವಾಲ್ಮೀಕಿ ನಿಗಮ ಹಾಗೂ ಮೂಡಾ ಎರಡು ಹಗರಣಗಳು ನಡೆದಿವೆ. ವಾಲ್ಮೀಕಿ ಹಗರಣದಲ್ಲಿ ಈಗಾಗಲೇ ಓರ್ವ ಸಚಿವರ ತಲೆದಂಡವಾಗಿದೆ. ಮೂಡಾದಲ್ಲಿ ಸಿಎಂ ಕುಟುಂಬಕ್ಕೆ ಅಕ್ರಮವಾಗಿ ಸೈಟ್ ಹಂಚಲಾಗಿದೆ. ಎರಡೂ ಹಗರಣಗಳಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದು, ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿಲ್ಲಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read