HomeKarnatakaBIG NEWS: ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ: ರಾಜ್ಯ ಸರ್ಕಾರ ಹಗಲು ದರೋಡೆ ಮಾಡುತ್ತಿದೆ;...

BIG NEWS: ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ: ರಾಜ್ಯ ಸರ್ಕಾರ ಹಗಲು ದರೋಡೆ ಮಾಡುತ್ತಿದೆ; ಸಿ.ಟಿ.ರವಿ ವಾಗ್ದಾಳಿ

ಬೆಂಗಳೂರು: ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಬಿಜೆಪಿ ಮಾಜಿ ಶಾಸಕ ಸಿ.ಟಿ.ರವಿ, ರಾಜ್ಯ ಸರ್ಕಾರ ಹಗಲು ದರೋಡೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ಹಗರಣ ನಡೆದಿದೆ. ಹಗರಣದಿಂದ ಬೇಸತ್ತು ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರ ಹಗಲು ದರೋಡೆ ಮಾಡುತ್ತಿದೆ ಎಂದು ಕಿಡಿಕಾರಿದರು.

ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಬೇಕು. ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆಯಾಗಲಿ ಎಂದು ಆಗ್ರಹಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular