HomeKarnatakaBREAKING : ವಾಲ್ಮೀಕಿ ನಿಗಮದ ಹಗರಣ ಕೇಸ್ : ಮೂವರು ಆರೋಪಿಗಳಿಗೆ 'CBI' ನೋಟಿಸ್

BREAKING : ವಾಲ್ಮೀಕಿ ನಿಗಮದ ಹಗರಣ ಕೇಸ್ : ಮೂವರು ಆರೋಪಿಗಳಿಗೆ ‘CBI’ ನೋಟಿಸ್

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಚುರುಕುಗೊಳಿಸಿದ್ದು, ಮೂವರು ಆರೋಪಿಗಳಿಗೆ ನೋಟಿಸ್ ನೀಡಲಾಗಿದೆ.

ಸಿಬಿಐ ನೋಟಿಸ್ ಬೆನ್ನಲ್ಲೇ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಪ್ರಕರಣದ ಪ್ರಮುಖ ಆರೋಪಿ ಚಂದ್ರ ಮೋಹನ್ ಮತ್ತು ಕುಟುಂಸ್ಥರಿಗೆ ಸಿಬಿಐ ನೋಟಿಸ್ ನೀಡಿದೆ. ಚಂದ್ರ ಮೋಹನ್ ವಾಲ್ಮೀಕಿ ನಿಗಮದ ಪ್ರಕರಣದಲ್ಲಿ 89 ಕೋಟಿ ವರ್ಗಾವಣೆ ಮಾಡಿದ್ದ ಆರೋಪ ಹೊಂದಿದ್ದಾರೆ.

ಇನ್ನಿಬ್ಬರು ಆರೋಪಿಗಳಾದ ಪರಶುರಾಮ್, ಸತ್ಯನಾರಾಯಣ ಅವರಿಗೆ ನೋಟಿಸ್ ನೀಡಿರುವ ಸಿಬಿಐ ಅಧಿಕಾರಿಗಳು ಇಬ್ಬರ ವಿಚಾರಣೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular