ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ನಾಗೇಂದ್ರ ವಿರುದ್ಧ ಇಡಿ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಕೇಸ್ ಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ, ನಾಗೇಂದ್ರ ವಿರುದ್ಧ ತನಿಖೆಗೆ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪ್ರಸ್ತಾವನೆ ಸಲ್ಲಿಸಿತ್ತು. ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ಶಾಸಕ ಬಿ.ನಾಗೇಂದ್ರ ವಿರುದ್ಧ ಇಡಿ ತನಿಖೆ ಕೈಗೊಳ್ಳಲಿದ್ದು, ನಾಗೇಂದ್ರಗೆ ಸಂಕಷ್ಟ ಎದುರಾಗಿದೆ.