HomeKarnatakaBIG NEWS: ವಾಲ್ಮೀಕಿ ನಿಗಮದಲ್ಲಿ ಅಕ್ರಮ ಪ್ರಕರಣ; ಮಾಜಿ ಸಚಿವ ನಾಗೇಂದ್ರಗೆ SIT ನೋಟಿಸ್

BIG NEWS: ವಾಲ್ಮೀಕಿ ನಿಗಮದಲ್ಲಿ ಅಕ್ರಮ ಪ್ರಕರಣ; ಮಾಜಿ ಸಚಿವ ನಾಗೇಂದ್ರಗೆ SIT ನೋಟಿಸ್

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ವಾಲ್ಮೀಕಿ ನಿಗಮದ ಅಧ್ಯಕ್ಷರಿಗೆ ವಿಶೇಷ ತನಿಖಾ ತಂಡ (SIT) ನೋಟಿಸ್ ನೀಡಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಾಗೂ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಎಸ್ ಐಟಿ ರಚನೆ ಮಾಡಿದ್ದು, ತನಿಖೆ ಚುರುಕುಗೊಂಡಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಇಬ್ಬರು ಎಸ್ ಐಟಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ. ವಾಲ್ಮೀಕಿ ನಿಗದಲ್ಲಿ 185 ಕೋಟಿ ಅಕ್ರಮ ನಡೆದಿದೆ ಎಂದು ನಿಗಮದ ಅಧಿಕಾರಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ ಐಟಿ ತನಿಖೆಗೆ ವಹಿಸಿದೆ. ಇನ್ನೊಂದೆಡೆ ಸಿಬಿಐ ಹಾಗೂ ಇಡಿ ಕೂಡ ಪ್ರತ್ಯೇಕ ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular